ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಗುತ್ತಿನ ಬಳಿ ನಿವಾಸಿ ವಿಜಯ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಸಂಬಂಧಿಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ರೂ. 1,60,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಕಮಲಾಕ್ಷಿ ಪೂಜಾರಿ, ಪಂಜಿಕಲ್ಲು ಗ್ರಾ.ಪಂ ಉಪಾಧ್ಯಕ್ಷ ಲಕ್ಷ್ಮಿನಾರಾಯಣ ಗೌಡ ಉಪಸ್ಥಿರಿದ್ದರು.














