Wednesday, January 28, 2026

ಹೋಮ್ ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಅಧಿಕಾರಿಗಳು ನಿಗಾ ಇರಿಸಿ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ಕೊರೊನಾ ವೈರಸ್ ಮುನ್ನೆಚ್ಚರಿಕೆಯಾಗಿ ಗ್ರಾಮೀಣ ಭಾಗಗಳಲ್ಲಿ ರಚನೆಗೊಂಡಿರುವ ಟಾರ್ಸ್ಪೋರ್ಸ್ ಸಮಿತಿಗಳ ಕಾರ್ಯವೈಖರಿ ಪರಿಶೀಲಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ತಾಲೂಕಿನ ಮೂರು ಗ್ರಾ.ಪಂ.ಗಳಲ್ಲಿ ಸಭೆ ನಡೆಸಿದರು.
ತಾಲೂಕಿನ ಬಡಗಬೆಳ್ಳೂರು, ಅಮ್ಮುಂಜೆ ಹಾಗೂ ಕರಿಯಂಗಳ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿದರು.

ಗ್ರಾ.ಪಂ.ವ್ಯಾಪ್ತಿಯಲ್ಲಿ ವಿತರಣೆಯಾಗಿರುವ ಪಡಿತರ ಅಕ್ಕಿ ಹಾಗೂ ಹೋಮ್ ಕ್ವಾರಂಟೈನ್‌ನಲ್ಲಿರುವವರ ಕುರಿತು ಶಾಸಕರು ಮಾಹಿತಿ ಪಡೆದರು.

ಸಭೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಯಶವಂತ ಪೊಳಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷೆ ಜಯಂತಿ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ಕರಿಯಂಗಳ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ, ಶಾಸಕ ಆಪ್ತ ಕಾರ್ಯದರ್ಶಿ ದಿನೇಶ್, ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆಯವರು, ಆಶಾ ಕಾರ್ಯಕರ್ತೆಯರು, ನ್ಯಾಯಬೆಲೆ ಅಂಗಡಿಯವರು ಮೊದಲಾದವರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...