Saturday, January 31, 2026

ಕರೋಪಾಡಿ ಗ್ರಾಮದ ಪಳ್ಳದಕೋಡಿ-ಪದ್ಯಾಣದ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ

ವಿಟ್ಲ: ಇಲ್ಲಿನ ಕರೋಪಾಡಿ ಗ್ರಾಮದ ಪಳ್ಳದಕೋಡಿ-ಪದ್ಯಾಣದ ರೂ 2.25 ಕೋಟಿ ಅನುದಾನದ ಕಾಂಕ್ರಿಟೀಕೃತ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪಳ್ಳದಕೋಡಿ-ಪದ್ಯಾಣ ಭಾಗದ ಜನತೆಗಾಗಿ ಸರ್ವಋತು ರಸ್ತೆಯನ್ನು ನಿರ್ಮಾಣಗೊಳಿಸಿ ನೀಡಿದ ಭರವಸೆಯನ್ನು ಈಡೇರಿಸಿದ ತೃಪ್ತಿ ತನಗಿದೆ ಎಂದರು.

ಈ ಸಂದರ್ಭದಲ್ಲಿ ಬೂಡಾ ಅದ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಈಶ್ವರ ಶಾಸ್ತ್ರಿ, ವಿಘ್ನೇಶ್ವರ ಭಟ್ ಅನೆಯಾಲಕೋಡಿ, ರಘುನಾಥ ಶೆಟ್ಟಿ ಪಟ್ಲಗುತ್ತು, ಬೇತ ಗೋಪಾಲಕೃಷ್ಣ ಭಟ್, ಸುನಿಲ್ ಪದ್ಯಾಣ, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ವಿನೋದ್ ಪಟ್ಲ, ಪದ್ಮನಾಭ ಮುಗುಳಿ, ಕೊಳ್ನಾಡು ಮಹಾಶಕ್ತಿಕೇಂದ್ರ ಬಿಜೆಪಿ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...