Wednesday, January 28, 2026

ಕೊರೊನಾ ಮುಕ್ತರಾದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ

ಮಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಗುಣಮುಖರಾಗಿರುವ ಬಗ್ಗೆ ವರದಿಯಾಗಿದೆ. ಆದಿತ್ಯವಾರ ಬಂದ ಕೊರೊನಾ ವರದಿಯ ಪ್ರಕಾರ ಅವರಲ್ಲಿ ಕೊರೊನಾ ಸೋಂಕು ಇಲ್ಲ ಎಂಬುವುದು ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಜುಲೈ 2 ರಂದು ಶಾಸಕ ಭರತ್ ಶೆಟ್ಟಿ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬಳಿಕ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹತ್ತು ದಿನಗಳ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿದ್ದಾರೆ. ಮತ್ತೊಮ್ಮೆ ಪರೀಕ್ಷೆ ನಡೆಸಿದ ಗಂಟಲು ದ್ರವ ಪರೀಕ್ಷಾ ವರದಿ ಲಭ್ಯವಾಗಿದ್ದು, ಅದು ನೆಗೆಟಿವ್ ಆಗಿದೆ. ಆ ಮೂಲಕ ಶಾಸಕ ಭರತ್ ಶೆಟ್ಟಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂಬ ಮಾಹಿತಿ ಇದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...