Tuesday, February 3, 2026

ಸೇವಾಕಾರ್ಯಗಳಿಗೆ ಮತ್ತಷ್ಟು ಒತ್ತು: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಜಗತ್ತು ಕಂಡ ಪ್ರಭಾವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರದ ೭ನೇ ವರ್ಷದ ಸಂಭ್ರಮವನ್ನು ಸೇವಾ ಕಾರ್ಯದ ಮೂಲಕ ಆಚರಣೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಪಕ್ಷದ ಹಿರಿಯರ ಸೂಚನೆಯಂತೆ ಬಿಜೆಪಿ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿರುವುದು ಹೆಮ್ಮೆಯ ವಿಚಾರ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ೭ನೇ ವರ್ಷಾಚರಣೆಯ ಸಂಭ್ರಮವಾಗಿ ಅನಂತಾಡಿ, ನೆಟ್ಲಮುಡ್ನೂರು, ಮಾಣಿ ಹಾಗೂ ಪೆರಾಜೆ ಗ್ರಾಮದ ಬಿಜೆಪಿ ಪಕ್ಷದ ವತಿಯಿಂದ ಅನಂತಾಡಿ ಗ್ರಾಮದ ಗೋಳಿಕಟ್ಟೆ ಜಂಕ್ಷನ್ ನಲ್ಲಿ ನಡೆದ ಸೇವಾಕಾರ್ಯಕ್ಕೆ ಚಾಲನೆ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಒಪ್ಪಿಗೆ ಪಡೆದ ಲಸಿಕೆಯ ಕುರಿತು ಸಾಕಷ್ಟು ಅಪಪ್ರಚಾರ ಮಾಡಿದವರಿಗೆ ಲಸಿಕೆ ಅನಿವಾರ್ಯತೆ ಏನು ಎಂಬುದನ್ನು ಪ್ರಧಾನಿಗಳು ತೋರಿಸಿಕೊಟ್ಟಿದ್ದಾರೆ. ಪಿಪಿಇ ಕಿಟ್, ಮಾಸ್ಕ್ ಗಳನ್ನು ತಯಾರು ಮಾಡಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ.

ಬಂಟ್ವಾಳದಲ್ಲಿಯೂ ಕೊರೊನಾ ಎದುರಿಸಲು ಎಲ್ಲಾ ಸಿದ್ಧತೆ ಯಶಸ್ವಿಯಾಗಿ‌ ನಡೆದಿದ್ದು, ಕೊರೊನಾಕ್ಕೆ ಮೀಸಲಿಟ್ಟ ೧೫೫ ಬೆಡ್ ಗಳ ಪೈಕಿ ೨೬ ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕ್ಸಿಜನ್ ಬೆಡ್ ಗಳು ಕೂಡ ಬಂಟ್ವಾಳದಲ್ಲಿ ಖಾಲಿ ಇದೆ. ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಿತ್ತಿರುವುದು ನಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ವಿರೋಧಿಗಳು ಏನೇ ಹೇಳಿದರೂ, ನಮ್ಮ ಕೆಲಸಗಳು ನಿರಂತರವಾಗಿ‌ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕಿಯರಿಗೆ ಅಕ್ಕಿ ವಿತರಣೆ, ಚಾಲಕರಿಗೆ ಸಹಾಯಧನದ ಸೇವಾಸಿಂಧು ನೋಂದಣಿಗೆ ಚಾಲನೆ, ಸಸಿ ವಿತರಣೆ- ನೆಡುವಿಕೆ, ಕೊರೊನಾ ಜಾಗೃತಿ ಪ್ರಚಾರ ಮೊದಲಾದ ೭ ಬಗೆಯ ಸೇವಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ನೆಟ್ಲ ಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್, ಅನಂತಾಡಿ ಗ್ರಾಮಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ, ಮಾಣಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರೊನಾಲ್ಡ್ ಡಿಸೋಜ, ಪ್ರಧಾನಕಾರ್ಯದರ್ಶಿ ಸನತ್ ಕುಮಾರ್, ನೇರಳಕಟ್ಟೆ ವ್ಯವಸಾಯ ಸಹಕಾರಿ ಕೇಂದ್ರದ ಅಧ್ಯಕ್ಷ ಪುಷ್ಪರಾಜ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಾಜಿ ತಾ.ಪಂ.ಸದಸ್ಯೆ ಗೀತಾಚಂದ್ರಶೇಖರ್, ಪ್ರಮುಖರಾದ ಗಣೇಶ್ ರೈ ಮಾಣಿ, ಯಶವಂತ ನಾಯ್ಕ್ ನಗ್ರಿ, ನಾರಾಯಣ ಶೆಟ್ಟಿ ಮಾಣಿ, ಶಕೀಲ್ ನೆಟ್ಲ ಮುಡ್ನೂರು,ಅಶೋಕ್ ರೈ, ಧನಂಜಯ್, ಜಯಂತಿ, ಹರೀಶ್ಉಪಸ್ಥಿತರಿದ್ದರು. ದಿನೇಶ್ ಅನಂತಾಡಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...