Monday, January 26, 2026

ಮಹಾಕಾಳೇಶ್ವರ​ ಕಾರಿಡಾರ್ ಲೋಕಾರ್ಪಣೆ : ಬಿ.ಸಿ ರೋಡು ಬಿಜೆಪಿ ಕಚೇರಿಯಲ್ಲಿ ಅದ್ಬುತ ಕ್ಷಣದ ವೀಕ್ಷಣೆ

ಬಂಟ್ವಾಳ: ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ​ ಕಾರಿಡಾರ್ ಲೋಕಾರ್ಪಣೆಗೊಂಡಿದ್ದು,  ಈ ಅದ್ಬುತ ಕ್ಷಣವನ್ನು ಬಿ.ಸಿ ರೋಡು ಬಿಜೆಪಿ ಕಚೇರಿಯಲ್ಲಿ ವೀಕ್ಷಿಸಲಾಯಿತು.

2017ರಲ್ಲಿ ಈ ಕಾರಿಡಾರ್ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಇದೀಗ 2ನೇ ಹಂತದ ಮಹಾಕಾಳೇಶ್ವರ ಕಾರಿಡಾರ್ ನಿರ್ಮಾಣವಾಗುತ್ತಿದೆ. ಮಹಾಕಾಳೇಶ್ವರ್​ ಕಾರಿಡಾರ್​ಗೆ ಒಟ್ಟು 856 ಕೋಟಿ ರೂಪಾಯಿ ವೆಚ್ಚವಾಗಲಿದೆ. ಮೊದಲ ಹಂತದಲ್ಲಿ 350 ಕೋಟಿ ರೂಪಾಯಿ ನಿರ್ಮಾಣದಲ್ಲಿ ಕಾರಿಡಾರ್ ನಿರ್ಮಾಣವಾಗಿದೆ.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಡೊಂಬಯ ಅರಳ ಜಿಲ್ಲಾ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ನಿರ್ದೇಶಕರಾದ ಶ್ರೀಮತಿ ಸುಲೋಚನಾ ಜಿ ಕೆ ಭಟ್ ಜಿಲ್ಲಾ ಕಲೆ ಮತ್ತು ಸಂಸ್ಕೃತಿ ಪ್ರಕೋಷ್ಠದ ಸಂಚಾಲಕರಾದ ಅಶೋಕ್ ಶೆಟ್ಟಿ ಸರಪಾಡಿ ಮತ್ತು ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಆನಂದ ಶಂಭೂರು ಎಸ್ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ ಜಿಲ್ಲಾ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಲೋಕೇಶ್ ಎರ್ಮೆನಾಡು ಕ್ಷೇತ್ರದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...