Thursday, February 13, 2025

ದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ ಗೆಲ್ಲಿಸಲು ಮೋದಿ ಕರೆ

ಶಿವಮೊಗ್ಗ: ದ.ಕ ಕ್ಷೇತ್ರದ ನಮ್ಮ ಅಭ್ಯರ್ಥಿಯಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ತಮ್ಮ ಅಮೂಲ್ಯವಾದ ಮತನೀಡಿ ಭಾರೀ ಅಂತರದಿಂದ ಗೆಲ್ಲಿಸಲು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ಬೃಹತ್‌ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನುದ್ದೇಶಿಸಿ ಮಾತನಾಡಿ, ” ಅಪಾರ ಸಂಖ್ಯೆಯಲ್ಲಿ ನೆರೆದಿರುವ ಈ ಜನರ ಉತ್ಸಾಹಭರಿತ ದೃಶ್ಯ ನೋಡುತ್ತಿದ್ದರೆ, ಇಡೀ ಮೈದಾನದಲ್ಲಿ ಶಕ್ತಿ ಸಿಂಚನಗೊಂಡು ಹರಿದಾಡುತ್ತಿದೆಯೇನೋ ಅನಿಸುತ್ತಿದೆ. ಈ ಜನೋತ್ಸಾಹವು ಮತ್ತೊಂದು ಕಡೆಗೆ ಒಗ್ಗೂಡಿರುವ ಭ್ರಷ್ಟಾಚಾರ ಮತ್ತು ಜಾತಿ ತುಷ್ಟೀಕರಣದಲ್ಲಿ ಮುಳುಗಿರುವ ಇಂಡಿ ಅಲಯನ್ಸ್‌ ನ ನೆಮ್ಮದಿ, ನಿದ್ದೆ ಹಾರಿಹೋಗಿದೆ ಎಂದರು.

ಏಪ್ರಿಲ್‌ 26 ಮತ್ತು ಮೇ 7 ರಂದು ನಡೆಯಲಿರುವ ಚುನಾವಣೆಯಲ್ಲಿ ತಮ್ಮಗಳ ಭಾಗಿದಾರಿಕೆಯಿಂದ ದೇಶದ ನವಯುವಕರಿಗೆ ಹೊಸ ದಿಕ್ಸೂಚಿ ದೊರಕಲಿದೆ. ಇದೇ ಏಪ್ರಿಲ್‌ 26 ರಂದು ನಡೆಯಲಿರುವ ದಕ್ಷಿಣ ಕನ್ನಡ ಕ್ಷೇತ್ರದ ನಮ್ಮ ಅಭ್ಯರ್ಥಿಯಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ತಮ್ಮ ಅಮೂಲ್ಯವಾದ ಮತನೀಡಿ ಭಾರೀ ಅಂತರದಿಂದ ಗೆಲ್ಲಿಸಲು ಮನವಿ ಮಾಡಿದ್ದಾರೆ.

ಇದೇ ವೇಳೆ ಶಿವಮೊಗ್ಗದ ಜನರನ್ನು ಪ್ರಶಂಶಿಸಿದ್ದು, ಒಂದು ಕಾಲದಲ್ಲಿ ನಾವು ಮತ್ತು ನಮ್ಮ ಪಕ್ಷವು ಅಷ್ಟೇನು ಸಾಧಿಸದ ಸಮಯದಲ್ಲಿ ನಮ್ಮ-ನಿಮ್ಮೆಲ್ಲರ ನಾಯಕ ಯಡಿಯೂರಪ್ಪನವರು ತಮ್ಮ ಇಡೀ ಜೀವನವನ್ನೇ ಪಕ್ಷ ಸಂಘಟನೆಯಲ್ಲಿ ಕಳೆದಿದ್ದಾರೆ. ಇದು, ಇವರ ತಪೋಭೂಮಿ ಕೂಡ ಆಗಿದೆ. ಈ ಕ್ಷೇತ್ರದ ಅಭ್ಯರ್ಥಿ ಸೇರಿದಂತೆ ಸಮಸ್ತ ಕರ್ನಾಟಕದ ಅಭ್ಯರ್ಥಿಗಳನ್ನು ʼಮೋದಿ ಅಭಿವೃದ್ಧಿಯ ರಾಯಭಾರಿಗಳನ್ನು ಚುನಾಯಿಸಿ ದಿಲ್ಲಿಗೆ ಕಳುಹಿಸುವ ಜವಾಬ್ದಾರಿ ನಿಮ್ಮೆಲ್ಲರದು. ಎಲ್ಲ 28 ಕ್ಷೇತ್ರಗಳನ್ನು ಬಿಜೆಪಿ ಬೆಂಬಲಿತ ಎನ್.ಡಿ.ಎ. ಒಕ್ಕೂಟಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮತನೀಡಿ ಗೆಲ್ಲಿಸುವಂತೆ ತಮ್ಮಲ್ಲಿ ಪ್ರಾರ್ಥಿಸಲು ಇಂದು ಇಲ್ಲಿಗೆ ಬಂದಿದ್ದೇನೆ ಎಂದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...