Wednesday, February 12, 2025

ಸಾಂಕ್ರಾಮಿಕ ರೋಗಗಳು ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ : ಕರ್ಕೇರ

ಬಂಟ್ವಾಳ: ಸಾಂಕ್ರಾಮಿಕ ರೋಗಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸ್ವಚ್ಛತೆಗೆ ಹೆಚ್ಷಿನ ಆದ್ಯತೆ ನೀಡುವಂತೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಹೇಳಿದರು.
ಅವರು ತಾ.ಪಂ.ನ.ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಮಾಸಿಕ ಸಭೆಯಲ್ಲಿ ಹೇಳಿದರು.
ರೋಗಗಳು ಬಂದ ಮೇಲೆ ಎಚ್ಚೆತ್ತುಕೊಳ್ಳುವುದಕ್ಕಿಂತ ರೋಗ ಬರುವ ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಲ್ಲಿ ತಿಳಿಸಿದರು.


ತಾಲೂಕಿನಲ್ಲಿ ಶಂಕಿತ ಡೆಂಗ್ಯೂ ಗೆ ಒರ್ವ ಬಲಿಯಾದ ಬಗ್ಗೆ ಮಾಹಿತಿಯನ್ನು ವೈದ್ಯಾಧಿಕಾರಿಗಳ ಬಳಿ ಕೇಳಿದಾಗ ಅದು ಡೆಂಗ್ಯೂ ಜ್ವರ ಎಂಬ ಬಗ್ಗೆ ಇನ್ನೂ ಕೂಡಾ ಖಚಿತವಾದ ವರದಿ ಬಂದಿಲ್ಲ.
ಅವರ ರಕ್ತದ ಸರಿಯಾದ ವರದಿ ಬಂದ ಬಳಿಕವೇ ಹೇಳಬಹುದು ಎಂದು ತಿಳಿಸಿದರು. ಡೆಂಗ್ಯೂ ರೋಗದ ಬಗ್ಗೆ ಜನ ಸಾಮಾನ್ಯರಿಗೆ ಹಾಗೂ ಶಾಲಾ ಮಕ್ಕಳಿಗೆ ಹೆಚ್ಚಿನ ಮಾಹಿತಿ ನೀಡುವಂತೆ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಹಾಗೂ ತೋಟಗಾರಿಕೆ ಇಲಾಖೆಯ ಸಸಿಗಳನ್ನು ಶೀಘ್ರವಾಗಿ ಕೃಷಿಕರಿಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇಲಾಖಾ ವರದಿಗಳು ತಿಂಗಳ 2 ನೇ ತಾರೀಖಿನಂದು ಬರಲೇ ಬೇಕು ಎಂದು ತಾ.ಪಂ.ಇ.ಒ.‌ರಾಜಣ್ಣ ಅಧಿಕಾರಿ ಗಳಿಗೆ ಸೂಚಿಸಿದರು.
ಪ್ರತಿ ಮೀಟಿಂಗ್ ಗಳಲ್ಲಿ ವರದಿ ಸರಿಯಾದ ಸಮಯಕ್ಕೆ ಬರದೆ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಉಪಸ್ಥಿತರಿದ್ದರು. ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...