Wednesday, February 12, 2025

ಸ್ಥಳ ಮಹಜರಿಗಾಗಿ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು

ಉಡುಪಿ: ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ.

2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...