Friday, June 27, 2025

ಜೂನ್ ತಿಂಗಳ ಕೊರೊನಾ ಸ್ಥಿತಿಗತಿ ನೋಡಿ ಸಿನಿಮಾ ಹಾಲ್‌ ತೆರೆಯುವಿಕೆ ಬಗ್ಗೆ ಚಿಂತನೆ -ಪ್ರಕಾಶ್ ಜಾವಡೇಕರ್

ಮಂಗಳೂರು : ಈ ತಿಂಗಳ (ಜೂನ್‌) ಕೊರೊನಾ ವೈರಸ್‌ನ ಸ್ಥಿತಿಗತಿಯನ್ನು ನೋಡಿಕೊಂಡು ಸಿನಿಮಾ ಟಾಕೀಸ್ ಪ್ರಾರಂಭ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. ನಿನ್ನೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಲನಚಿತ್ರ ನಿರ್ಮಾಪಕರ ಸಂಘ, ಸಿನೆಮಾ ಪ್ರದರ್ಶಕರು ಮತ್ತು ಚಿತ್ರೋದ್ಯಮದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು, ಜೂನ್‌ ತಿಂಗಳಿನಲ್ಲಿ ಕೊರೊನಾಸ್ಥಿತಿಗತಿಯನ್ನು ಪರಾಮರ್ಶಿಸಿ ಸಿನಿಮಾ ಹಾಲ್‌ಗಳನ್ನು ತೆರೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಈ ಮೊದಲೇ ಸಚಿವರಿಗೆ ಚಲನಚಿತ್ರ ರಂಗದ ಪ್ರತಿನಿಧಿಗಳು ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಚಿತ್ರರಂಗಕ್ಕೆ ಆದ ನಷ್ಟಗಳ ಬಗ್ಗೆ ತಿಳಿಸಿ ಸಿನಿಮಾಹಾಲ್‌ ತೆರೆಯುವಂತೆ ಮನವಿ ಸಲ್ಲಿಸಿದ್ದು, ಅದರಲ್ಲಿ ಚಲನಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಅನೇಕ ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಉಂಟಾಗಿದ್ದು, ವೇತನದಲ್ಲಿ ಸಬ್ಸಿಡಿ, 3 ವರ್ಷಗಳವರೆಗೆ ಬಡ್ಡಿರಹಿತ ಸಾಲ, ತೆರಿಗೆ ಮತ್ತು ಸುಂಕ ವಿನಾಯ್ತಿ, ವಿದ್ಯುತ್ ಬಿಲ್ ಕಡಿತ ಮೊದಲಾದ ಬೇಡಿಕೆ ಮಾಡಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...