17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ನಾಳೆ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಯಶಸ್ವಿ ನಾಯಕ ಎಂಎಸ್ ಧೋನಿ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಇವರ ಬದಲಿಗೆ ಈಗ ಋತುರಾಜ್ ಗಾಯಕ್ವಾಡ್ ಸಿಎಸ್‌ಕೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತವಾಗಿ ಚೆನ್ನೈ ಪ್ರಾಂಚೈಸಿ ತಿಳಿಸಿದೆ.
ಇಷ್ಟೇ ಅಲ್ಲ ಧೋನಿ ಆಟಗಾರನಾಗಿ ಚೆನ್ನೈ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಿಎಸ್‌ಕೆ ತಿಳಿಸಿದೆ.