Thursday, June 26, 2025

ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ಕಛೇರಿಯಲ್ಲಿ ಹಣದ ಬ್ಯಾಗ್‌ ಪತ್ತೆ

ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಮೂಡ ಕಚೇರಿಗೆ ದಿನಾಂಕ 13.03.2024 ರಂದು ಸಂಜೆ ಅನಿರೀಕ್ಷಿತ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದ್ದು, ಪರಿಶೀಲನೆ ನಡೆಸಿದಾಗ ಕಛೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದ್ದು, ಸೂಕ್ತ ಉತ್ತರ ಸಿಕ್ಕಿರುವುದಿಲ್ಲ, ಕಛೇರಿಯಲ್ಲಿ ಹಣದ ಬ್ಯಾಗ್ ಪತ್ತೆಯಾಗಿರುವುದಾಗಿರುತ್ತದೆ.

ಪರಿಶೀಲನೆ ನಡೆಸುತ್ತಿರುವ ವೇಳೆ ಹಲವು ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿರುತ್ತಾರೆ. ಪರಿಶೀಲನೆ ಸಂದರ್ಭ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿರುತ್ತದೆ. ಅಧಿಕಾರಿಗಳು ಬ್ರೋಕರ್ ಗಳೊಡನೆ ಫೋನ್ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಾಗಿ ಸಾಕ್ಷಿ ದೊರೆತಿರುತ್ತದೆ. ಈ ಹಿನ್ನಲೆಯಲ್ಲಿ ಮೂಡ ಕಛೇರಿ ಜಾಲದ ಬಗ್ಗೆ ತನಿಖೆ ಮುಂದುವರೆದಿರುತ್ತದೆ.

ಸಿ.ಎ. ಸೈಮನ್, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಚಲುವರಾಜು, ಬಿ, ಡಾ|| ಗಾನ ಪಿ ಕುಮಾರ್, ಹಾಗೂ ಪೊಲೀಸ್ ನಿರೀಕ್ಷಕರಾದ ಶ್ರೀ ಅಮಾನುಲ್ಲಾ.ಎ, ಶ್ರೀ ಸುರೇಶ್ ಕುಮಾರ್.ಪಿ ಇವರು ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ತುಳು ನಾಟಕ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ.. 

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ...

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ..

ಮಂಗಳೂರು : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ವತಿಯಿಂದ 2025 ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾಮಟ್ಟದಲ್ಲಿ...

ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ವಿಟ್ಲ: ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ 18 ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ...