Sunday, January 25, 2026

ಮುಕ್ಕ ಚಚ್೯ನಲ್ಲಿ ಪರಿಸರ ದಿನಾಚರಣೆ

ಮುಂಬಯಿ: ಕಥೊಲಿಕ್ ಸಭಾ ಮಂಗಳೂರು ಪ್ರದೇಶ, ಸುರತ್ಕಲ್ ವಲಯ ಮತ್ತು ಘಟಕಗಳ ವತಿಯಿಂದ ಪರಿಸರ ಜಾಗೃತಿ ಅಭಿಯಾನ-2019 ಪ್ರಯುಕ್ತ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಪರಿಸರ ದಿನಾಚರಣೆ ಮುಕ್ಕ ಚಚ್೯ ವಠಾರದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತ್ಯ ಶ್ರೇಷ್ಠ ಗುರು ಮ್ಯಾಕ್ಸಿಂ ಎಲ್. ನೊರೊನ್ಹಾ ಅಶೀರ್ವಚನಗೈದರು.
ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಗೀಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ವೈ ಭರತ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದರು.
ಕಿನ್ನಿಗೋಳಿ ವಲಯ ಅರಣ್ಯಾಧಿಕಾರಿ ಕೆ.ಸಿ ಮ್ಯಾಥ್ಯು ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಇಂಗಿಸುವಿಕೆ ಬಗ್ಗೆ ಮಾಹಿತಿ ನೀಡಿದರು.
ಕಥೋಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಮ್ಯಾಥ್ಯು ವಾಸ್, ಸುರತ್ಕಲ್ ವಲಯದ ಪಾವ್ಲ್ ಪಿಂಟೊ, ಅಧ್ಯಾತ್ಮಿಕ ನಿರ್ದೇಶಕ ಸಿರಿಲ್ ಪಿಂಟೊ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ಮುಕ್ಕ ಚಚ್೯ ಸಮಿತಿಯ ಉಪಾಧ್ಯಕ್ಷ ರೋಶನ್ ಡಿಸೋಜ, ಕಾರ್ಯದರ್ಶಿ ಶೈಲಾ ಡಿಸೋಜ, ಕೇಂದ್ರೀಯ ಸಮಿತಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೊಸ್ತಾ, , ಮುಕ್ಕ ಘಟಕ ಅಧ್ಯಕ್ಷ ಸಂತೋಷ್ ಸಿಕ್ವೇರಾ, ಪರಿಸರ ಸಂರಕ್ಷಣಾ ಸಮಿತಿ ಸಂಚಾಲಕ ಹೆನ್ರಿ ವಾಲ್ಡರ್ ಉಪಸ್ಥಿತರಿದರು.
ಕಥೋಲಿಕ್ ಸಭಾ ಸುರತ್ಕಲ್ ವಲಯಾಧ್ಯಕ್ಷ ರಸ್ಸೆಲ್ ರೊಚ್ ಸ್ವಾಗತಿಸಿದರು. ಕೇಂದ್ರೀಯ ಕಾರ್ಯದರ್ಶಿ ನವೀನ್ ಬ್ರ್ಯಾಗ್ಸ್ ವಂದಿಸಿದರು. ಮುಕ್ಕ ಘಟಕ ಕಾರ್ಯದರ್ಶಿ ಫ್ಲೇವಿ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...