Wednesday, July 9, 2025

ಅ.23ರಂದು ಮೂಲರಪಟ್ನದಲ್ಲಿ ಸಿರಾಜುದ್ದೀನ್ ಖಾಸಿಮಿಯಿಂದ ಏಕದಿನ ಮತ ಪ್ರಭಾಷಣ: ನೌಶಾದ್ ಹಾಜಿ ಸೂರಲ್ಪಾಡಿ  

ಬಂಟ್ವಾಳ: ಮುಹಿಯುದ್ದೀನ್ ಜುಮಾ ಮಸೀದಿ ಮೂಲರಪಟ್ನ ಇದರ ನವೀಕರಣ ಹಾಗೂ ಮೀಲಾದುನ್ನಬಿ ಪ್ರಯುಕ್ತ ಕೇರಳದ ಪ್ರಸಿದ್ಧ ವಾಗ್ಮಿ ಅಲ್ ಹಾಫಿಲ್ ಸಿರಾಜುದ್ದೀನ್ ಅಲ್ ಖಾಸಿಮಿ ಅವರ ಏಕ ದಿನ ಮತ ಪ್ರಭಾಷಣ ಅ.23ರಂದು ರಾತ್ರಿ ಮೂಲರಪಟ್ನ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಉದ್ಯಮಿ, ಸಮಾಜ ಸೇವಕ ನೌಷಾದ್ ಹಾಜಿ ಸೂರಲ್ಪಾಡಿ ಹೇಳಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ (ಇಂದು) ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.23ರಂದು ಸಂಜೆ 6:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ, ಯು.ಟಿ.ಖಾದರ್, ಬಿ.ಝೆಡ್.ಝಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಹಲವು ಧಾರ್ಮಿಕ, ರಾಜಕೀಯ, ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಎಂ.ಜೆ.ಎಂ. ಖತೀಬರಾದ ಅಬ್ದುಸಲಾಂ ಯಮಾನಿ ತುಂಬೆ ಉದ್ಘಾಟಿಸಲಿದ್ದು, ಎಂ.ಜೆ.ಎಂ. ಅಧ್ಯಕ್ಷ ಎಂ.ಬಿ.ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನಿಸ್ ಕೌಸರಿ ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ. ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್ ಉಪಸ್ಥಿತಲಿರುವರು ಎಂದು ಹೇಳಿದರು.

ಈ ಬೃಹತ್ ಕಾರ್ಯಕ್ರಮದ ಪ್ರಯುಕ್ತ ಮೂಲರಪಟ್ನ ಸೇತುವೆ ಆ ದಿನ ವಾಹನಗಳ ಸಂಚಾರಕ್ಕೆ ಮುಕ್ತವಾಗಿರಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮೂಲರಪಟ್ನ ಮಸೀದಿ ಅಧ್ಯಕ್ಷ ಎಂ.ಬಿ.ಅಶ್ರಫ್, ಬಡಗಬೆಳ್ಳೂರು ಬಾಲಿಕೆ ಮಸ್ಜಿದ್ ಇಮಾಂ ಶಿಬ್ಲಿ ಇದರ ಅಧ್ಯಕ್ಷ ಬಿ.ಎಚ್.ಅಶ್ರಫ್, ಜಿ.ಎಚ್.ಎಂ. ಫೌಂಡೇಶನ್ ನ ಅಧ್ಯಕ್ಷ ಎಂ.ಎಸ್.ಶಾಲಿ, ಫರ್ವೇಝ್, ಸಜೀಯುದ್ದೀನ್ ಉಪಸ್ಥಿತರಿದ್ದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...