Saturday, July 12, 2025

ಗುರು ಬೆಳದಿಂಗಳು ಸಂಸ್ಥೆಯಿಂದ ಗುರು ತತ್ವ ಪಾಲನೆ: ಮೂಲ್ಕಿ ಸೀಮೆಯ ದುಗ್ಗಣ್ಣ ಸಾವಂತ ಅರಸರು ಶ್ಲಾಘನೆ

ಜಾತಿಯತೆ ಹೋಗಲಾಡಿಸಬೇಕು. ಎಲ್ಲರನ್ನೂ ಸಮಾನರಾಗಿ ಕಾಣಬೇಕು ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಗುರು ಬೆಳದಿಂಗಳು ಸೇವಾ ಸಂಸ್ಥೆ ಮೂಲಕ ಅಕ್ಷರಶಃ ಪಾಲನೆಯಾಗುತ್ತದೆ ಎಂದು ಮೂಲ್ಕಿ ಸೀಮೆಯ ದುಗ್ಗಣ್ಣ ಸಾವಂತ ಅರಸರು ಹೇಳಿದರು.

ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನ ಪ್ರಯುಕ್ತ ಕುದ್ರೋಳಿ ಗುರು ಬೆಳದಿಂಗಳು ಸೇವಾ ಸಂಸ್ಥೆಯಿಂದ ಮೂಲ್ಕಿಯ ಚಂದ್ರನಾಥ ಸ್ವಾಮಿ ಬಸದಿ ವಠಾರದಲ್ಲಿ ಶುಕ್ರವಾರ ಔಷಧೀಯ ಸಸ್ಯಗಳ ನೆಡುವ ಮೂರನೇ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚರ್ಚ್, ಬಸದಿ, ಮಸೀದಿ, ದೇವಸ್ಥಾನದಲ್ಲಿ ಔಷಧೀಯ ಗಿಡಗಳನ್ನು ನೆಡುವ ಮೂಲಕ ಗುರುಗಳ ನಾವೆಲ್ಲರೂ ಒಂದೇ ಎನ್ನುವ ತತ್ವ ಪರಿಪಾಲನೆಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು.

ಪಣಂಬೂರು ಎಸಿಪಿ ಮಹೇಶ್ ಕುಮಾರ್, ಗುರುಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್. ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್‌ಕುಮಾರ್, ಗುರು ಚಾರಿಟೆಬಲ್‌ ಟ್ರಸ್ಟ್ ಮಾಜಿ ಅಧ್ಯಕ್ಷ ಚಂದ್ರಶೇಖರ್ ನಾನಿಲ್, ಬಹರೆನ್ ಬಿಲ್ಲವಾಸ್ ಸ್ಥಾಪಕಾಧ್ಯಕ್ಷ ರಾಜ್‌ಕುಮಾರ್, ಉದ್ಯಮಿ ವಿವೇಕ್‌ರಾಜ್ ಪೂಜಾರಿ, ಏಸ್ ಪ್ರಮೋಟರ್ಸ್‌ನ ಗುರುಮೂರ್ತಿ ರಾವ್, ಬಿಲ್ಲವ ಮಹಾಮಂಡಲ ಖಜಾಂಚಿ ಯೋಗೀಶ್ ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಉದಯ ಅಮೀನ್ ಮಟ್ಟು, ಸುವರ್ಣ ಆರ್ಟ್ಸ್ ಚಂದ್ರಶೇಖರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...