Tuesday, January 27, 2026

ಬಿಲ್ಲವರ ಭವನದ ಬೆಳ್ಳಿಪರದೆಯಲ್ಲಿ ‘ದೇಯಿಬೈದೆತಿ’ ಪ್ರದರ್ಶಿಸಿದ ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಸೇವಾ ಟ್ರಸ್ಟ್ (ಮುಂಬಯಿ)

ಮುಂಬಯಿ, ಎ.೦೭: ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಸೇವಾ ಟ್ರಸ್ಟ್ (ಮುಂಬಯಿ) ಇಂದಿಲ್ಲಿ ಭಾನುವಾರ ಬೆಳಿಗ್ಗೆ ಸಾಂತಾಕ್ರೂಸ್ ಪೂರ್ವದ ಬಿಲ್ಲವರ ಭವನದ ಬೆಳ್ಳಿಪರದೆಯಲ್ಲಿ ‘ದೇಯಿಬೈದೆತಿ’ ಪ್ರದರ್ಶಿಸಿದ್ದು ಭವನದ ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆ ಹಾಗೂ ಕೋಟಿ-ಚೆನ್ನಯರಿಗೆ ಪುಷ್ಫನಮನದೊಂದಿಗೆ ಗಣ್ಯರು ಉದ್ಘಾಟಿಸಿದರು.

ತುಳುನಾಡಿಗರ ರೋಚಕ ಇತಿಹಾಸವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ತುಳು ಚಿತ್ರರಂಗದಲ್ಲೇ ಮೊಟ್ಟಮೊದಲ ಬಾರಿಗೆ ಅದ್ಭುತವಾಗಿ ನಿರ್ಮಾಣಗೊಂಡ ಚಿತ್ರವೆಂದು ಭಾರಿ ಮೆಚ್ಚುಗೆ ವ್ಯಕ್ತಪಡಿಸಿ ‘ಯು’ ಪ್ರಮಾಣಪತ್ರ ನೀಡಿದ, ಸೂರ್ಯೋದಯ ಪೆರಂಪಳ್ಳಿ ಈ ಅವರ ಸಾಹಿತ್ಯ, ಚಿತ್ರಕಥೆ, ಸಂಭಾಷಣೆ, ನಿರ್ಮಾಣ ಹಾಗೂ ನಿರ್ದೇಶನದ ತುಳು ಚಲನಚಿತ್ರ ‘ದೇಯಿಬೈದೆತಿ’ ಪ್ರದರ್ಶಿಸಿಸಲ್ಪಟ್ಟಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ‘ದೇಯಿಬೈದೆತಿ’ ಚಲನಚಿತ್ರದ ಚಿತ್ರಕಥೆ ರಚನೆಕಾರ, ನಿರ್ಮಾಪಕ ಮತ್ತು ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ, ಉದ್ಯಮಿ, ಕೊಡುಗೈದಾನಿ ಹೆರ್ಗ ಬಾಬು ಪೂಜಾರಿ, ಗೌರವಾನ್ವಿತ ಅತಿಥಿಗಳಾಗಿ ಭಾರತ್ ಬ್ಯಾಂಕ್‌ನ ನಿರ್ದೇಶಕರಾದ ಶಾರದಾ ಸೂರು ಕರ್ಕೇರ, ಪುರುಷೋತ್ತಮ ಎಸ್.ಕೋಟ್ಯಾನ್ ಹಾಗೂ ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮವತೀ ಗರೊಡಿ ಸೇವಾ ಟ್ರಸ್ಟ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಉಪಾಧ್ಯಕ್ಷರಾದ ಸಿ.ಕೆ ಅಮೀನ್ ಮತ್ತು ಡಿ.ಬಿ ಅವಿನ್, ಸಲಹಾದಾರ ಶಂಕರ್ ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಸಂಜೀವ ಪೂಜಾರಿ ತೋನ್ಸೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಮಾರು ೫೦೦ ವರ್ಷಗಳ ಹಿಂದಿನ ಕಾಲಕ್ಕೆ ಸರಿಹೊಂದುವ ಭವ್ಯ ಮನೆಗಳಸೆಟ್‌ಗಳನ್ನು ನಿರ್ಮಿಸಲಾಗಿ ಆ ಕಾಲದ ಕರ್ನಾಟಕ ಕರಾವಳಿಗರ ಜನಜೀವನ, ಆಚಾರ ವಿಚಾರ, ಉಡುಗೆ ತೊಡುಗೆಗಳ ಓರಣಗಳನ್ನು, ತುಳುನಾಡಿನ ಅಗೋಚರ ಸಂಪ್ರದಾಯಗಳ ಕಟ್ಟುಪಾಡುಗಳನ್ನು ಈ ಚಿತ್ರದಲ್ಲಿ ಬಿಂಬಿಸಿರುವ ಈ ಚಿತ್ರ ಗರೋಡಿಗಳ (ಶಿಬಿರ) ವ್ಯವಸ್ಥೆ ಮತ್ತು ಬಲಾಢ್ಯತೆ ಸಾಧಿಸಿವ ವಿಧಾನವನ್ನು ಪರಿಚಯಿಸುವ ಪ್ರಯತ್ನ ಮಾಡಿದ್ದೇವೆ. ಯಾವುದೇ ಜಾತಿಮತ, ಧರ್ಮಪಂಥಗಳಿಗೆ ಸೀಮಿತವಾದ ಕತೆಯಲ್ಲ. ಸಾಮಾನ್ಯ ಮಹಿಳೆ ಓರ್ವಳು ಅಸಮಾನ್ಯವಾಗಿ ಮೆರೆದ ಜೀವನಶೈಲಿಯನ್ನು ಬಿಂಬಿಸಲಾಗಿದೆ. ತುಳುನಾಡ ಮೂಲ ಮಣ್ಣಿನ ಕಥೆಯಾಗಿಸಿ ಈ ಚಿತ್ರ ನಿರ್ಮಿಸಲಾಗಿದೆ ಎಂದು ಸೂರ್ಯೋದಯ ಪೆರಂಪಳ್ಳಿ ತಿಳಿಸಿದರು.

ಪ್ರತಿಯೊಬ್ಬ ತಾಯಿಯ ಸಹಾಸಗಾಥೆ, ತನ್ನ ದೇಹದ ರಕ್ತಬಸಿದು ಹೆತ್ತುಹೊತ್ತು ಸಲುಹುವತಾಯಿ ಎಂಬ ಕರುಣಾಮಯಿಯು ರಾಜ್ಯದ ಪ್ರಜೆಗಳ ಒಳಿತಿಗಾಗಿ ತನ್ನ ಪ್ರಾಣವನ್ನೇ ಅರ್ಪಣೆಗೈದ ಸಾಮಾನ್ಯ ಮಹಿಳೆಯ ಅಸಮಾನ್ಯ ವೀರಗಾಥೆ ಸಾರುವ ಸುಮಾರು ಮೂರು ಗಂಟೆಗಳ ಕಾಲ ಪ್ರೇಕ್ಷಕರನ್ನು ೫೦೦ ವರ್ಷಗಳ ಹಿಂದಕ್ಕೆ ಕೊಂಡೊಯ್ಯುದು ಚಿಂತನೆಗೆ ಈಡುಮಾಡುವ ಈ ಚಿತ್ರವು ತಮ್ಮತಮ್ಮ ತಾಯಂದಿರ ತ್ಯಾಗಮಯ ಬದುಕನ್ನು ನೆನೆದು ಬಿಗಿದಪ್ಪಿ ರೋದಿಸುತ್ತಾ, ಯುವಪೀಳಿಗೆ ಜೀವನದ ಮಾರ್ಗದರ್ಶನವನ್ನು ನೀಡುವಂತಹದ್ದು. ಕನ್ನಡ, ತಮಿಳು, ತುಳು ಚಿತ್ರರಂಗದಲ್ಲಿ ಸುಮಾರು ೨೫ ವರ್ಷಗಳ ಕಾಲ ದುಡಿದು ಅನುಭವ ಹೊಂದಿರುವ ಸೂರ್ಯೋದಯ ಪೆರಂಪಳ್ಳಿ ನಿರ್ದೇಶನದ ಚೊಚ್ಚಲ ಚಲನಚಿತ್ರ ಇದಾಗಿದೆ ಇದು ನಮ್ಮೆಲ್ಲರ ಹಿರಿಮೆಯಾಗಿದೆ ಎಂದು ನಿತ್ಯಾನಂದ ಡಿ.ಕೋಟ್ಯಾನ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಸೇವಾ ಟ್ರಸ್ಟ್‌ನ ಅಶೋಕ್ ಎಂ. ಕೋಟ್ಯಾನ್, ಸುರೇಶ್ ಅಂಚನ್, ಕೆ.ಗೋಪಾಲ್ ಪಾಲನ್ ಕಲ್ಯಾಣ್ಫುರ್, ಕೃಷ್ಣ ಪಾಲನ್, ವಿ.ಸಿ ಪೂಜಾರಿ, ರೂಪ್‌ಕುಮಾರ್ ಕಲ್ಯಾಣ್ಫುರ್, ಉದಯ ಎನ್.ಪೂಜಾರಿ ಮತ್ತಿತರರು ಉಪಸ್ಥಿತರಿದ್ದು, ವಿಶ್ವನಾಥ್ ತೋನ್ಸೆ, ಸ್ವಾಗತಿಸಿ ಪ್ರಸ್ತಾವನೆಗೈದ. ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಪದಾಧಿಕಾರಿಗಳು ಅತಿಥಿಗಳಿಗೆ ಪುಷ್ಫಗುಪ್ಚಗಳನ್ನೀಡಿ ಗೌರವಿಸಿದರು. ಸಂಜೀವ ಪೂಜಾರಿ ತೋನ್ಸೆ ವಂದಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...