Friday, January 30, 2026

ಮುಂಬಯಿಯಲ್ಲಿ 53 ಪತ್ರಕರ್ತರಿಗೆ ಕೊರೋನಾ ಪೋಸಿಟಿವ್

ಮುಂಬಯಿ: ಮಹಾಮಾರಿ ಕೊರೋನಾ ಸಾಂಕ್ರಾಂಮಿಕದ ವರದಿ ಮಾಡಲು ಹೋದ 53 ಪತ್ರಕರ್ತರಿಗೆ ಕೊರೋನಾ ಪೋಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ.

ಪತ್ರಕರ್ತರುಗಳಿಗಾಗಿಯೇ ಏರ್ಪಡಿಸಿದ್ದ ವಿಶೇಷ ಕೋವಿಡ್ 19 ತಪಾಸಣೆಗಳ ಪರೀಕ್ಷಾ ವರದಿಗಳು ಬಂದಿದ್ದು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ವೆಭ್ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿ 53 ಮಂದಿ ಪತ್ರಕರ್ತರಿಗೆ ಕೊರೋನಾ ಪೋಸಿಟಿವ್ ಆಗಿದೆ. ಇವರಲ್ಲಿ ಹೆಚ್ಚಿನವರು ಕಸ್ತೂರ್ ಬಾ ಆಸ್ಫತ್ರೆ ಹಾಗೂ ಧಾರಾವಿ ಯಲ್ಲಿಂದ ವರದಿ ಮಾಡುತ್ತಿದ್ದರು. ಮಹಿಳಾ ವರದಿಗಾರರೊಬ್ಬರೂ ಇದರಲ್ಲಿ ಸೇರಿರಿವರು ಎಂದು ತಿಳಿದು ಬಂದಿದೆ.

ಸೋಂಕಿನ ಲಕ್ಷಣವನ್ನಾಧರಿಸಿ 174 ಮಾಧ್ಯಮ ಸಿಬ್ಬಂಧಿಗಳನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಟಿವಿ ಪತ್ರಕರ್ತರು ಮತ್ತು ಮಂತ್ರಾಲಯ ಹಾಗೂ ಶಾಸನಸಭೆ ವರದಿಗಾರದ ಒಕ್ಕೂಟದ ಮನವಿ ಮೇರೆಗೆ ಪ್ರತ್ಯೋಕ ಆರೋಗ್ಯ ಶಿಭಿರವನ್ನು ಆಯೋಜಿಸಲಾಗಿದೆ ಎಂದು ಕನ್ನಡಿಗ ಮುಂಬಯಿ ಪ್ರಸ್ ಕ್ಲಬ್ ನ ಜಯ ಪುಜಾರಿ ತಿಳಿಸಿದ್ದಾರೆ.

ಹೆಚ್ಚಾಗಿ ಸಾರ್ವಜನಿಕ ಸ್ಥಳಗಳಿಗೆ ಹೋಗಿ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮದವರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ನ್ನು ಉಪಯೋಗಿಸುದನ್ನು ಕಡ್ಡಾಯಗೊಳಿಸಲಾಗಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...