Thursday, June 26, 2025

ಮುಂಬೈ :ಕೊರೋನಾ ವೈರಸ್ ನಿಂದ ಮುಕ್ತವಾದ 18 ದಿನದ ಮಗು

ಮುಂಬೈ: ಮುಂಬೈ ಯ 18 ದಿನದ ಹಸುಗೂಸು ಮಾರಕ ಕೊರೋನಾ ವೈರಸ್ ಅನ್ನು ಸೋಲಿಸಿ ಗುಣವಾಗಿ ಹೀರಾನಂದಾನಿ ಆಸ್ಪತ್ರೆಯಿಂದ ಗುರುವಾರ ಬಿಡುಗಡೆಯಾದ ಬಗ್ಗೆ ಮಾಧ್ಯಮದ ವರದಿ ತಿಳಿಸಿದೆ.

ಆದ್ದರಿಂದ ದೇಶದಲ್ಲಿ ಹರಡುತ್ತಿರುವ ಮಾರಣಾಂತಿಕ ವೈರಸ್ ನಿಂದ ಗುಣಮುಖ ಹೊಂದಿದ ಅತೀ ಕಿರಿಯ ರೋಗಿ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತಾಯಿ ಕೋವಿಡ್ ವೈರಸ್ ವರದಿ ನೆಗೆಟಿವ್ ಬಂದಿರುವುದು ಅಚ್ಚರಿಯ ವಿಷಯ.

ವೈದ್ಯರ ಹೇಳಿದಂತೆ, ಮೇ 10ರಂದು ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದರು. ಮಗು ಹುಟ್ಟಿದ 3ಗಂಟೆಯಲ್ಲಿಯೇ ಮಗುವಿಗೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಮಗುವನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿ ಪರೀಕ್ಷಿಸಿದಾಗ ಕೋವಿಡ್ 19 ವೈರಸ್ ಪತ್ತೆಯಾಗಿತ್ತು.
ಮೇ 12ರಂದು ಹೀರಾನಂದಾನಿ ಆಸ್ಪತ್ರೆಗೆ ಹೆಣ್ಣು ಮಗುವನ್ನು ಸ್ಥಳಾಂತರಿಸಿ ಕೋವಿಡ್ 19 ವೈರಸ್ ಗೆ ಚಿಕಿತ್ಸೆ ನೀಡಲಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ವಿಪರೀತ ಜ್ವರ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿತ್ತು ಎಂದು ಹೇಳಿದ್ದಾರೆ. ಪುಟ್ಟ ಮಗುವನ್ನು ಉಪಕರಣ ರಹಿತ ವೆಂಟಿಲೇಶನ್ ನಲ್ಲಿ ಇರಿಸಲಾಗಿತ್ತು. ಚಿಕಿತ್ಸೆಯ ಬಳಿಕ ಮಗುವನ್ನು ಮೇ 28ರಂದು (ಇಂದು) ಪರೀಕ್ಷಿಸಿದಾಗ ನೆಗೆಟಿವ್ ವರದಿ ಬಂದಿತ್ತು.

ನಂತರ ಇಂದು 18 ದಿನದ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಡಾ. ಬಿಜಾಲ್ ಶ್ರೀವಾಸ್ತವ್ ತಿಳಿಸಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...