Wednesday, January 28, 2026

ಬೆಂಗ್ರೆಯಲ್ಲಿ ಫೆ.3ರಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರವಾಸ್ತವ್ಯ

ಮಂಗಳೂರು: ಮಂಗಳೂರಿನ ಬೆಂಗ್ರೆಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದದ ನಗರವಾಸ್ತವ್ಯ ಕಾರ್ಯಕ್ರಮ ಫೆ.3ರಂದು ಸಂಜೆ ಇರಲಿದ್ದು, ತಾವೆಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂಬ ಆಹ್ವಾನವನ್ನು ಅಧ್ಯಕ್ಷರು ನೀಡಿದ್ದಾರೆ. ಇದರಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಮಾರು 20 ನಿಮಿಷಗಳ ಕಾರ್ಯಕ್ರಮ ಮಾದಕ ದ್ರವ್ಯದ ಕುರಿತಾಗಿ ನೀಡಬೇಕು ಎಂದು ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದು, ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ತಿಳಿಸುವುದಾಗಿ ಹೇಳಿದ್ದೇನೆ. ಸಮಗ್ರ ಬಂಟ್ವಾಳ ಮತ್ತು ವಿಟ್ಲ ಭಾಗದ ಪತ್ರಕರ್ತರು ಫೆ.3ರಂದು ಸಂಜೆ 4ರಿಂದ ರಾತ್ರಿವರೆಗೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆಯುವ ನಗರವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡುತ್ತಿದ್ದೇನೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...