ಬಂಟ್ವಾಳ: ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ವೀರಕಂಭ ಇಲ್ಲಿ ಶಾರದ ಪೂಜಾ ಮಹೋತ್ಸವ ಹಾಗೂ ಆಂಗ್ಲ ಮಾಧ್ಯಮ ಶಾಲಾ ತರಗತಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.


ಮೌಲ್ಯಯುತ ಶಿಕ್ಷಣ ಮಗುವಿನ ಅಮೂಲಾಗ್ರವಾದ ಬದಲಾವಣೆ ಸಾಧ್ಯ ಎಂದರು. ಕೇಂದ್ರ ಸರಕಾರ ಶಿಕ್ಷಣ ವ್ಯವಸ್ಥೆ ಯಲ್ಲಿ ಅಮೂಲಾಗ್ರವಾದ ಬದಲಾವಣೆಗಳನ್ನು ನಡಸುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿವೆ.
ಶಿಕ್ಷಣ ವ್ಯವಸ್ಥೆ ಗೆ ಪ್ರೇರಣೆ ನೀಡುವ ಸಮಾಜ ಸೇವಕರು, ಸಂಘ ಸಂಸ್ಥೆಗಳು ಮುಂದೆ ಬಂದಾಗ ಪರಿಣಾಮಕಾರಿ ಬದಲಾವಣೆ ಸಾಧ್ಯ ಎಂದರು.
ಸ್ಪರ್ಧಾತ್ಮಕ ಯುಗದ ಶಿಕ್ಷಣದ ಕಾಲಘಟ್ಟದಲ್ಲಿ ನಾವಿದ್ದೇವೆ.
ಹಾಗಾಗಿ ಗುಣಮಟ್ಟದ ಶಿಕ್ಷಣ ಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಬಳಿಕ ಪುಸ್ತಕ ವಿತರಣೆ ನಡೆಸಿದರು.
ವೇದಿಕೆ ಯಲ್ಲಿ ಗ್ರಾ.ಪಂ.ಅಧ್ಯಕ್ಷ ದಿನೇಶ್, ಸದಸ್ಯರಾದ ಜಯಂತಿ, ಮೀನಾಕ್ಷಿ, ಉಮಾವತಿ, ಸಂದೀಪ್ ಪೂಜಾರಿ, ಜಯಪ್ರಸಾದ್, ಮಾಜಿ ತಾ.ಪಂ.ಸದಸ್ಯ ರಾದ ಮಾದವ ಮಾವೆ, ಗೀತಾಚಂದ್ರಶೇಖರ್ ನಿವೃತ್ತ ಮುಖ್ಯ ಶಿಕ್ಷಕ ವಿಠಲ ಶೆಟ್ಟಿ, ದತ್ತು ಸಂಸ್ಥೆಯ ಮುಖ್ಯಸ್ಥ ಸಂತೋಷ್ ಕುಮಾರ್ ಶೆಟ್ಟಿ, ಹಿರಿಯ ರಾದ ನಗ್ರಿ ಮೂಲೆ ಈಶ್ವರ ಭಟ್ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಶಾಲಾಭಿವೃದ್ದಿ ಸಮಿತಿ ಸದಸ್ಯರು ಹಾಗೂ ಪ್ರಮುಖರಾದ ರಾಮ್ ಪ್ರಸಾದ್, ಜಯಕಲ್ಲಡ್ಕ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಮೈರ, ವಿಶ್ವನಾಥ, ಚಂದ್ರಶೇಖರ್ ಬಾಯಿಲ, ಜಗದೀಶ್ ಮತ್ತಿತರರು ಹಾಜರಿದ್ದರು.
ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಪ್ರಾಸ್ತಾವಿಕ ವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂಜೀವ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ನಿರೂಪಿಸಿದರು.
ಕಾರ್ಯಕ್ರಮದ ಬಳಿಕ ಶಾಲೆಯಲ್ಲಿ ನಿರ್ಮಿಸಿದ ಎರೆಹುಳ ಘಟಕದ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.

