Wednesday, February 12, 2025

ಪಕ್ಷದ ನಾಯಕರು ಗುಡಿಸು ಎಂದರೆ ಗುಡಿಸುತ್ತೇನೆ, ಒರೆಸು ಎಂದರೆ ಒರಸುತ್ತೇನೆ: ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನಿಂತ ನೀರಾಗಬಾರದು. ಹೊಸಬರು ಬರುತ್ತಿರಬೇಕು, ಚಲಾವಣೆಯಲ್ಲಿ ಇರಬೇಕು. ಹಾಗಾಗಿ ಪಕ್ಷದ ರಾಷ್ಟ್ರೀಯ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ. ಯಾರೇ ಅಭ್ಯರ್ಥಿಯಾದರೂ ನಮ್ಮ ಗುರಿ ಇರುವುದು ಬಿಜೆಪಿ ಅಧಿಕಾರಿ ಬರಬೇಕು ಮತ್ತು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಬೇಕು ಎನ್ನುವುದು. ರಾಷ್ಟ್ರೀಯ ನಾಯಕರ ಯೋಚನೆಗೆ ಬದ್ಧರಾಗಿ ನಾವು ಕೆಲಸ ಮಾಡುತ್ತೇವೆ. ಹಾಗಾಗಿ ಪಕ್ಷದ ನಾಯಕರು ಗುಡಿಸು ಎಂದು ಹೇಳಿದರೆ ಗುಡಿಸುತ್ತೇವೆ. ಒರೆಸು ಎಂದು ಹೇಳಿದರೆ ಒರೆಸುತ್ತೇವೆ. ರಾಷ್ಟ್ರೀಯ ನಾಯಕರ ಚಿಂತನೆಗಳು ಏನಿರುತ್ತದೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರ ಎಂದರು.

ನಾನು ಸಾಮಾಜಿಕ ಜಾಲತಾಣಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷದ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ನಾವು ಸಂಘಟನೆಯ ಕಾರ್ಯಕರ್ತರಾಗಿ ಬೆಳೆದವರು. ನನಗೆ ಮೂರು ಬಾರಿ ಅವಕಾಶ ಕೊಟ್ಟಿದ್ದಾರೆ. 15 ವರ್ಷ ಕೆಲಸ ಮಾಡಿದ್ದೇನೆ. ಟಿಕೆಟ್ ಸಿಗದಿದ್ದರೂ ಯಾವುದೇ ಅಸಮಧಾನವಿಲ್ಲ ಎಂದರು.

ನಮ್ಮ ಪಕ್ಷದಲ್ಲಿ ಯಾರನ್ನೂ ತುಳಿಯುವ ಕೆಲಸ ನಡೆಯುದಿಲ್ಲ. ಎಲ್ಲರನ್ನೂ ಬೆಳೆಸುವ ಕೆಲಸ ನಡೆಯುತ್ತದೆ. ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷನಾದ ಉದಾಹರಣೆ ಯಾವ ಪಕ್ಷದಲ್ಲೂ ಇಲ್ಲ. ಎಂಪಿ ಸೀಟ್- ಎಂಎಲ್‌ಎ ಸೀಟ್ ಸಿಕ್ಕಿಲ್ಲ ಎಂದರೆ ಅವನನ್ನು ಪಕ್ಷ ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಅವರಿಗೆ ಮುಂದಕ್ಕೆ ಬಹಳಷ್ಟು ಅವಕಾಶಗಳು ಸಿಗಬಹುದು ಎಂದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ಮಂಗಳೂರು: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ದುಬಾೖಯಿಂದ ಜ.17ರಂದು ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್‌ ರೋಗ ಲಕ್ಷಣಗಳು...