ಬಂಟ್ವಾಳ: ರಾಜ್ಯಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ನಳಿನ್ ಕುಮಾರ್ ಕಟೀಲು ಅವರು ಇಂದು ಬೆಳಿಗ್ಗೆ ಬಿಜೆಪಿಯ ಹಿರಿಯ ಕಾರ್ಯಕರ್ತ ಉದಯಕುಮಾರ್ ಅವರ ಮನೆಯಲ್ಲಿ ಚಾಕೂಟದಲ್ಲಿ ಪಾಲ್ಗೊಂಡರು.
ಬಳಿಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಜೊತೆಯಲ್ಲಿ ಬಿ.ಸಿ.ರೋಡಿನ ಸುಂದರೀಕರಣದ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ವಿಭಾಗ ಬಿಜೆಪಿ ಪ್ರಭಾರಿ ಉದಯಕುಮಾರ್ ಶೆಟ್ಟಿ, ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಶೆಟ್ಟಿ, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಹಿರಿಯ ಪುರಸಭಾ ಸದಸ್ಯ ಗೋವಿಂದ ಪ್ರಭು, ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್, ಬಂಟ್ವಾಳ ಕಸ್ಬಾದ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಜಕ್ರಿಬೆಟ್ಟು, ಪುರಸಭಾ ಸದಸ್ಯ ರಾದ ರೇಖಾರಮಾನಾಥ ಪೈ, ಶಶಿಕಲಾ, ದೇವಕಿ, ಮೀನಾಕ್ಷಿ, ಕಳ್ಳಿಗೆ ಗ್ರಾ.ಪಂ ಉಪಾಧ್ಯಕ್ಷ ಪುರುಷೋತ್ತಮ ಸಾಲಿಯಾನ್, ಪ್ರಮುಖರಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ ಮತ್ತಿತರರು ಹಾಜರಿದ್ದರು.
