Wednesday, January 28, 2026

ಮೇ 10 ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಸಾರ್ವಜನಿಕ ಪ್ರವೇಶಕ್ಕೆ ನಿಷೇಧವನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಅವರು ಆದೇಶವನ್ನು ಹೊರಡಿಸಿದ್ದಾರೆ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಕ್ರಿಯೆಯಲ್ಲಿ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ದಂಡ ಸಂಹಿತೆ ಪ್ರಕ್ರಿಯೆ ಸಂಹಿತೆ (ಸಿ.ಆರ್.ಪಿ.ಸಿ) 1973 ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಬೆಳಿಗ್ಗೆ 5:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವನ್ನು ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ.

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...