Saturday, January 31, 2026

ನಂದಿನಿ ಡೀಲರ್ ಗಳ ಸಮಾಲೋಚನಾ ಸಭೆ

ಬಂಟ್ವಾಳ : ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಇವರ ವತಿಯಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಅಭಿವೃದ್ಧಿ ಗಾಗಿ ಅಧಿಕೃತ ನಂದಿನಿ ಡೀಲರ್ ಗಳ ಸಮಾಲೋಚನಾ ಸಭೆ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ರವಿರಾಜ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜುಲೈ 27 ರಂದು ಮಧ್ಯಾಹ್ನ ನಡೆಯಿತು.
ನಂದಿನಿ ಡೀಲರ್ ಗಳು
 ಗುಣಮಟ್ಟವನ್ನು ಕಾಯ್ದುಕೊಂಡು ಗ್ರಾಹಕರಿಗೆ ಬೇಡಿಕೆಗಳಿಗೆ ಅನುಗುಣವಾಗಿ ಕ್ಲಪ್ತ ಸಮಯದಲ್ಲಿ  ಉತ್ತಮ ಸೇವೆ ನೀಡಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದರು.
ನಂದಿನಿ ಉತ್ಪನ್ನ ಗಳು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ.ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಹಾಗೂ
 ಮೂಲಕ ಜನಪ್ರಿಯ ತೆ ಪಡೆದಿದೆ ಎಂದು ಅವರು ಹೇಳಿದರು.
ನಂದಿನಿ ಉತ್ಪನ್ನಗಳ ಬಗ್ಗೆ ಗ್ರಾಹಕರಿಗೆ ಡೀಲರುಗಳು ಮಾಹಿತಿ ನೀಡಬೇಕಾಗಿದೆ.
ಸಾಮಾಜಿಕ ಸೇವೆ ಎಂಬ ದೃಷ್ಟಿಯಿಂದ ಡೀಲರುಗಳ ನಿಮ್ಮ ಸೇವೆ ಬೇಕಾಗಿದೆ ಎಂದು ಹೇಳಿದರು.
ಅತ್ಯಧಿಕ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಿದ ಐದು ಮಂದಿ  ಡೀಲರುಗಳನ್ನು  ಆಧ್ಯಕ್ಷರು ಒಕ್ಕೂಟದ ವತಿಯಿಂದ ವಿಶೇಷ ಗೌರವ ನೀಡಿದರು.
ಈ ಸಂದರ್ಭದಲ್ಲಿ  ಒಕ್ಕೂಟದ ನಿರ್ದೇಶಕ ರುಗಳಾದ ಸುಚರಿತ ಶೆಟ್ಟಿ, ಸವಿತಾ ಶೆಟ್ಟಿ, ಸುಧಾಕರ ರೈ, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ  ಜಯದೇವಪ್ಬ ಉಪಸ್ಥಿತರಿದ್ದರು.
ಮಾರುಕಟ್ಟೆ ಅಧಿಕಾರಿ ಚೇತನ್ ಕುಮಾರ್ ಸ್ವಾಗತಿಸಿ, ಮಾರುಕಟ್ಟೆ ಅಧೀಕ್ಷಕ ರವಿ ಕುಮಾರ್ ವಂದಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...