Tuesday, January 27, 2026

ಕೆಲಸಕ್ಕೆ ಹೋದ ವ್ಯಕ್ತಿ ನಾಪತ್ತೆ

ಬಂಟ್ವಾಳ: ವ್ಯಕ್ತಿಯೊಬ್ಬರು ಮದುವೆಗೆ ಹೋಗುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ. ಪಂಜಿಕಲ್ಲು ಗ್ರಾಮದ ಕೋಲ್ದೋಡಿ ನಿವಾಸಿ ಕೇಶವ ಪೂಜಾರಿ(36) ನಾಪತ್ತೆಯಾವರು.

ಅವರು ಇಂಟರ್‌ಲಾಕ್ ಕೆಲಸ ಮಾಡಿಕೊಂಡಿದ್ದು, ಜ. 3ರಂದು ಬೆಳಗ್ಗೆ 10.30ಕ್ಕೆ ಮದುವೆಗೆಂದು ತೆರಳಿದ್ದು, ಬಳಿಕ ಮರಳಿ ಬಂದಿಲ್ಲ. ನೆರೆಕರೆಯವರು, ಸಂಬಧಿಕರ ಮನೆಯಲ್ಲಿ ಹುಡುಕಿದರೂ ಅವರು ಪತ್ತೆಯಾಗಿಲ್ಲ.

ಈ ಹಿಂದೆಯೂ ಅವರು 3-4 ಬಾರಿ ಇದೇ ರೀತಿ ಮನೆ ಬಿಟ್ಟು ಹೋಗಿದ್ದು, ಹೀಗಾಗಿ ಈ ಬಾರಿಯೂ ಮರಳಿ ಬರುತ್ತಾರೆಂದು ಪೊಲೀಸರಿಗೆ ದೂರು ನೀಡಿರಲಿಲ್ಲ. ಇದೀಗ ಅವರ ಪತ್ನಿ ಯಶೋಧಾ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...