Sunday, February 1, 2026

ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ ವ್ಯಕ್ತಿ ನಾಪತ್ತೆ

ಬಂಟ್ವಾಳ : ಬೆಂಗಳೂರು ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ಕಾಣೆ ಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿದೆ.

ಮೂಲತಃ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕುರ್ಮಾನ್ ನಿವಾಸಿ ಉದಯರಾಜ್ (26) ಎಂಬಾತ ಕಾಣೆಯಾಗಿರುವ ಯುವಕ.

ಉದಯರಾಜ್ ಅವರು ಬೆಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮನೆಗೆ ಬಂದು ಉಳಿದುಕೊಂಡಿದ್ದರು. ಲಾಕ್ ಡೌನ್ ಮುಕ್ತಾಯ ವಾದ ಬಳಿಕ ವಾಪಸು ಅಗಸ್ಟ್ ತಿಂಗಳಲ್ಲಿ ಬೆಂಗಳೂರಿಗೆ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದರು.

ಹೋದ ಬಳಿಕ ದೂರವಾಣಿ ಸಂಪರ್ಕ ದ ಮೂಲಕ ತಾಯಿ ಹಾಗೂ ಮನೆಯವರೊಂದಿಗೆ ಮಾತನಡಿಕೊಂಡಿದ್ದ ಉದಯರಾಜ್ ಫೆ.20 ರ ಬಳಿಕ ಸಂಪರ್ಕಕ್ಕೆ ಸಿಗದೆ ಪೋನ್ ಸ್ವಿಚ್ ಆಪ್ ಬರುತ್ತಿದೆ.

ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ವಿಚಾರಿಸಿದಾಗ ಅಲ್ಲಿಯೂ ಇಲ್ಲ , ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವ ಬಗ್ಗೆ ಈತನ ಅಣ್ಣ ಯುವರಾಜ್ ಅವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...