Friday, June 27, 2025

ನಾಪತ್ತೆಯಾದಾತ ನೇಣು ಬಿಗಿದ ಸ್ಥಿತಿ ಯಲ್ಲಿ ಪತ್ತೆ

ಬಂಟ್ವಾಳ: ಕೆಲವುದಿನಗಳ ಹಿಂದೆ ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಇಂದು ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಪತ್ತೆಯಾಗಿರುತ್ತಾರೆ.

ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದರು.

ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು.

ರವಿವಾರ ಬೆಳಗ್ಗೆ ರಾಜೇಶ್ ಅವರ ಮೃತದೇಹ ನಯನಾಡಿನ ಖಾಸಗಿ ಜಮೀನಿನ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...