Monday, January 26, 2026

ಕೇಲ್ದೋಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ.! 12 ದಿನಗಳಲ್ಲಿ ಹುಡುಕಿ ಕೊಡುವ ಭರವಸೆ ನೀಡಿದ್ದ ಕೇಲ್ದೋಡಿ ವೈದ್ಯನಾಥ ದೈವ….

ಬಂಟ್ವಾಳ: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ‌ ಮನೆ ನಿವಾಸಿ ವ್ಯಕ್ತಿಯೊಬ್ಬರು, ಏಕಾಏಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ತೆಯಾಗಿ ಮಾ.7ರಂದು ಮನೆಗೆ ಮರಳಿದ್ದಾರೆ.

ಕೇಲ್ದೋಡಿ ನಿವಾಸಿ ಕೇಶವ ಪೂಜಾರಿ(36) ಅವರು ಜ.‌3ರಂದು ಮದುವೆಗೆ ಹೋಗುವುದಾಗಿ ಹೇಳಿ ಹೋದವರು ಹಿಂತಿರುಗಿ ಬಂದಿರಲಿಲ್ಲ. ಆದರೆ ಅವರು ಹಿಂದೆಯೂ 2-3 ಬಾರಿ ಇದೇ ರೀತಿ ಮನೆ ಬಿಟ್ಟು ಹೋಗಿ ಬಳಿಕ ಮನೆಗೆ ಮರಳಿದ್ದರು. ಹೀಗಾಗಿ ಅವರ ಪತ್ನಿ ಯಶೋಧಾ ಅವರು ತಡವಾಗಿ ದೂರು ನೀಡಿದ್ದರು.

ಇವರನ್ನು ಹುಡುಕಿ ಸೋತು ಹೋಗಿದ್ದ ಮನೆಯವರು ಹಾಗೂ ಊರಿನವರು ಮಾ. ರ ಕೇಲ್ದೋಡಿ ಜಾತ್ರೆಯ ಸಂದರ್ಭದಲ್ಲಿ ವೈದ್ಯನಾಥ ದೈವದ ಬಳಿ ಪ್ರಾರ್ಥನೆ ಮಾಡಿದ್ದು, 12ದಿನಗಳಲ್ಲಿ ಹುಡುಕಿ ಕೊಡುವ ಕುರಿತು ದೈವ ಮಾತುಕೊಟ್ಟಿತ್ತು. ಅಚ್ಚರಿ ಎಂಬಂತೆ ಏಳೇ ದಿನಗಳಲ್ಲಿ ಕೇಶವ ಪೂಜಾರಿ ಅವರು ಪತ್ತೆಯಾಗಿದ್ದಾರೆ.

More from the blog

ಸಜೀಪಮೂಡ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ..

ಬಂಟ್ವಾಳ : ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪ ಬದಲಾವಣೆ ಮಾಡಿದ ವಿರುದ್ಧ ವಲಯ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ...

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...