ಬಂಟ್ವಾಳ: ಕೋವಿಡ್ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಈ ಬಾರಿಯೂ ನರಹರಿ ಪರ್ವತ ಕ್ಷೇತ್ರದಲ್ಲಿ ಆ. ೮ರಂದು ಆಟಿ ಅಮಾವಾಸ್ಯೆಯ ತೀರ್ಥಸ್ನಾನ ಇರುವುದಿಲ್ಲ.


ನರಹರಿ ಪರ್ವತ ಕ್ಷೇತ್ರವು ಆಟಿ ಅಮಾವಾಸ್ಯೆಯ ತೀರ್ಥಸ್ನಾನಕ್ಕೆ ಪ್ರಸಿದ್ಧಿ ಪಡೆದಿದ್ದು, ಪ್ರತಿವರ್ಷ ಈ ದಿನ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತೀರ್ಥಸ್ನಾನಗೈದು ದೇವರಿಗೆ ಪ್ರಾರ್ಥನೆ ಸಲ್ಲಿಸುವುದು ಸಂಪ್ರದಾಯವಾಗಿದೆ.
ಜಿಲ್ಲಾಡಳಿತದ ಸೂಚನೆಯಂತೆ ಕ್ಷೇತ್ರದ ಆಡಳಿತ ಮಂಡಳಿಯು ತೀರ್ಥಸ್ನಾನಕ್ಕೆ ಅವಕಾಶವಿಲ್ಲ ಎಂದು ತೀರ್ಮಾನಿಸಿದ್ದು, ಭಕ್ತರು ಸಹಕರಿಸುವಂತೆ ದೇವಸ್ಥಾನದ ಪ್ರಕಟನೆ ತಿಳಿಸಿದೆ.












