Saturday, July 12, 2025

ನಾರಾಯಣ ಗುರುಗಳ ಸಂದೇಶ ಯುವಪೀಳಿಗೆಗೂ ತಿಳಿಹೇಳಬೇಕಾಗಿದೆ: ರಾಜ್ಯ ಸಭಾ ಸದಸ್ಯ ನಾಸೀರ್ ಹುಸೈನ್

ನಾರಾಯಣ ಗುರುಗಳು ನೀಡಿದಂತಹ ಸಂದೇಶವನ್ನೇ ಎಲ್ಲ ಸೂಫಿ, ಸಂತರೂ ನೀಡಿದ್ದಾರೆ. ಎಲ್ಲರಿಗೂ ದೇವನೊಬ್ಬನೇ‌, ಆದರೂ ನಾವು ಮಾತ್ರ ಜಾತಿ, ಧರ್ಮ ಹೊಡೆದಾಡಿಕೊಳ್ಳುತ್ತಿದ್ದೇವೆ. ಈ ಸಂದೇಶ ಗಟ್ಟಿಯಾಗಿಟ್ಟುಕೊಂಡು ಯುವಪೀಳಿಗೆಗೂ ತಿಳಿ ಹೇಳಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ನಾಸಿರ್ ಹುಸೈನ್ ಅಭಿಪ್ರಾಯಪ ಟ್ಟರು.

ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನ ಪ್ರಯುಕ್ತ ಕುದ್ರೋಳಿ ಗುರು ಬೆಳದಿಂಗಳು ಸೇವಾ ಸಂಸ್ಥೆಯಿಂದ ಉಳ್ಳಾಲ‌ ಜುಮಾ ಮಸೀದಿ, ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ಶುಕ್ರವಾರ ಔಷಧೀಯ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

 

ನಾಮ ಹಲವಿದ್ದರೂ ದೇವನೊಬ್ಬನೇ, ನಾರಾಯಣ ಗುರುಗಳ ಸಂದೇಶ ಪಾಲನೆ ಪ್ರತಿಯೊಬ್ಬರ ಕರ್ತವ್ಯ. ಅವರ ಜನ್ಮದಿನ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಧಾರ್ಮಿಕ ಕ್ಷೇತ್ರಗಳಲ್ಲಿ ಔಷಧೀಯ ಗಿಡಗಳನ್ನು ನೆಡುವ ಮೂಲಕ ಸೌಹಾರ್ದ ವಾತಾವರಣ ನಿರ್ಮಿಸಲು ಪ್ರಯತ್ನಿಸಲಾಗು ತ್ತಿದೆ ಎಂದು ಗುರು ಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷ ಆರ್‌.ಪದ್ಮರಾಜ್ ಹೇಳಿದರು.

ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಯು.ಟಿ.ಖಾದರ್, ಉಳ್ಳಾಲ‌ ನಗರಸಭೆಯ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಯು.ಪಿ. ಅಯೂಬ್ ಮಂಚಿಲ, ದರ್ಗಾ ಉಪಾಧ್ಯಕ್ಷರಾದ ಯು.ಕೆ.ಮೋನು ಇಸ್ಮಾಯಿಲ್, ಬಾವ ಮೊಹಮ್ಮದ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಜತೆ ಕಾರ್ಯದರ್ಶಿ ನೌಷಾದ್ ಅಲಿ, ಕೋಶಾಧಿ ಕಾರಿ ಯು.ಕೆ.ಇಲ್ಯಾಸ್, ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ, ಯು.ಕೆ.ಇಬ್ರಾಹಿಂ, ಜತೆಕಾರ್ಯದರ್ಶಿ ಎ.ಕೆ.ಮೊಯಿದ್ದೀನ್, ಕೋಶಾಧಿಕಾರಿ ಜೆ.ಅಬ್ದುಲ್ ಹಮೀದ್, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಬೂಬಕ್ಕರ್ ಕೋಟೆಪುರ, ಜತೆಕಾರ್ಯದರ್ಶಿ ಅಸಿಫ್ ಅಬ್ದುಲ್ಲಾ, ಸದಸ್ಯರಾದ ಫಾರೂಕ್ ಉಳ್ಳಾಲ್, ಅದ್ದಾಕ ಕೋಟೆಪುರ, ಯು.ಕೆ.ಹಮ್ಮಬ್ಬ ಕೋಟೆಪುರ, ಹಸೈನಾರ್ ಬೊಟ್ಟು, ಅಬೂಬಕ್ಕರ್ ಅಲಿನಗರ, ಇಬ್ರಾಹಿಂ ಉಳ್ಳಾಲಬೈಲು, ಕೆ.ಎನ್.ಮಹ್ಮೂದ್ ಅಳೇಕಲ, ಮಯ್ಯದ್ದಿ ಕೋಡಿ, ಖಾದರ್ ಮುಸ್ಲಿಯಾರ್ ಅಕ್ಕರೆಕರೆ, ಯು.ಪಿ.ಹಮೀದ್ ಅಳೇಕಲ, ಸಿ.ಎಂ. ಹನೀಫ್ ಚೆಂಬುಗುಡ್ಡೆ, ಎನ್.ಕೆ.ಅಹ್ಮದ್ ಅಳೇಕಲ, ಮೊಯ್ದಿನಬ್ಬ ಉಳ್ಳಾಲಬೈಲು, ಯು.ಟಿ.ಇಲ್ಯಾಸ್ ಕಲ್ಲಾಪು, ಯು.ಕೆ.ಹನೀಫ್ ಮಾರ್ಗತಲೆ, ಬಿ.ಎಸ್.ಹಾಶಿರ್ ಮದನಿ ನಗರ, ಮೊಹಮ್ಮದ್ ಕಲ್ಲಾಪು, ಹಸನಬ್ಬ ಕೈಕೊ, ಹನೀಫ್ ಕೋಡಿ ಸೋಲಾರ್, ಫಾರೂಕ್ ಚೆಂಬುಗುಡ್ಡೆ, ಅಬ್ದುಲ್ ರಹ್ಮಾನ್ ದಾರಂದಬಾಗಿಲು, ಜಬ್ಬಾರ್ ಮೇಲಂಗಡಿ, ಯು.ಬಿ.ಸಲೀಂ ಮೇಲಂಗಡಿ, ಅದ್ದಾಮ ಮೇಲಂಗಡಿ, ಕೆ.ಪಿ.ನಝೀರ್, ಯು.ಎಂ ಅಹ್ಮದ್, ಮತ್ತಿತರರು ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...