Saturday, January 31, 2026

ನರಿಕೊಂಬು ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ನರಿಕೊಂಬು ಗ್ರಾಮ ಪಂಚಾಯತಿನ ನರಿಕೊಂಬು ಹಾಗೂ ಶಂಬೂರು ಗ್ರಾಮದ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿಪಂ ಹಿ ಪ್ರಾ ಶಾಲೆ ನರಿಕೊಂಬು ಇಲ್ಲಿ ಗ್ರಾ ಪಂ ಅಧ್ಯಕ್ಷರಾದ ಸಂತೋಷ ಕುಮಾರ್ ರವರ ಅಧ್ಯಕ್ಷ ತೆಯಲ್ಲಿ ನಡಯತು.

ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ ಕೆ ನಾಯಕ್ ಭಾಗವಹಿಸಿದ್ದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫನತ್ಯಾಜ್ಯ ಫಟಕ ನಿರ್ಮಾಣ ವಾಗದ ಬಗ್ಗೆ ಹಾಗು ಫನತ್ಯಾಜ್ಯ ವಿಲೇವಾರಿ ಸೂಕ್ತ ರೀತಿಯಲ್ಲಿ ಆಗದಿರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡುವಂತೆ ಗ್ರಾಮಸ್ಥರು ಪ್ರಶ್ನಿಸಿದರು.

ಇದರ ಬಗ್ಗೆ ಪಂಚಾಯತ್ ಅಧ್ಯಕ್ಷರು ಉತ್ತರಿಸುತ್ತಾ ಈಗಾಗಲೇ ಸ್ದಳ ಗುರುತಿಸಿ ಫನತ್ಯಾಜ್ಯ ವಿಲೇವಾರಿಗಾಗಿ ಜಾಗ ಕಾಯ್ದಿರಿಸಲಾಗಿದೆ ಆದರೆ ಅಲ್ಲಿನ ಕೆಲವು ನಾಗರಿಕರ ವಿರೋಧ ಇರುವುದರಿಂದ ಕಾಮಗಾರಿ ಮಾಡಲು ಸಾಧ್ಯ ವಾಗುತ್ತಿಲ್ಲ ಎಂದು ತಿಳಿಸಿ ಮುಂದಿನ ದಿನಗಳಲ್ಲಿ ಫಟಕ ನಿರ್ಮಾಣ ಮಾಡಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವ ಬರವಸೆಯನ್ನು ನೀಡಿದರು

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ,ಗ್ರಾ ಪಂ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರು, ಅರೋಗ್ಯ ಸುರಕ್ಷಾಣಾಧಿಕಾರಿಗಳು ,ಗ್ರಾಮ ಸಮುದಾಯ ಅರೋಗ್ಯ ಅಧಿಕಾರಿ,ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು,ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾ ಪಂ ಸಿಬ್ಬಂದಿ ಗಳು ಹಾಜರಿದ್ದರು .ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಹರೀಶ್ ಕೆ ಎ ಸ್ವಾಗತಿಸಿ ವಂದಿಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...