Friday, January 30, 2026

ಬೆಂಕಿ ತಗುಲಿದ ಮಹಿಳೆ ಆಸ್ಪತ್ರೆ ಯಲ್ಲಿ ಸಾವು

ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆ ಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ನರಿಕೊಂಬು ಗ್ರಾಮದ ಕಲ್ಲಗ ದರ್ಖಾಸು ನಿವಾಸಿ ದಿ.ವೆಂಕಪ್ಪ ಪೂಜಾರಿ ಅವರ ಪತ್ನಿ ಸುಂದರಿ (62) ಮೃತಪಟ್ಟವರು.
ಮೇ.24 ರಂದು ಅಪರಾಹ್ನ ಮೂರು ಗಂಟೆಯ ವೇಳೆ ಅವರ ಮನೆಯ ಹೊರಭಾಗದಲ್ಲಿ ರುವ ಅಡುಗೆ ಶೆಡ್ಡಿನಲ್ಲಿರುವ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿಕೊಂಡಿರುವಾಗ ಒಲೆಯ ಬೆಂಕಿ ಆಕಸ್ಮಿಕವಾಗಿ ತಾಗಿ ಗಂಬೀರ ಗಾಯಗೊಂಡು ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು.
ಇವರ ಸೊಂಟದ ಭಾಗಕ್ಕೆ ಮತ್ತು ಕೈಗಳಿಗೆ ಬೆಂಕಿ ತಗುಲಿ ಗಂಭೀರ ಸ್ವರೂಪದ ಗಾಯಗಾಳಾಗಿತ್ತು.
ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಗೆ ದಾಖಲಿಸಲಾಗಿತ್ತು.
ಆದರೆ ಗಂಭೀರ ವಾದ ಗಾಯಗಳಿಗೆ ಚಿಕಿತ್ಸೆ ಫಲಕಾರಿಯಾಗದೆ ಸುಂದರಿ ಅವರು ಮೇ.29 ರಂದು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...