Wednesday, June 25, 2025

ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 11 ರೋಗಿಗಳ ಸಾವು

ಮುಂಬೈ: ಒಂದೆಡೆ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದಂತೆ ಇನ್ನೊಂದೆಡೆ ಸೋಂಕಿತರಿಗೆ ಮುಖ್ಯವಾಗಿ ಬೇಕಾಗಿರುವ ಆಕ್ಸಿಜನ್ ಕೊತರೆಯಿಂದ ದೇಶ ಬಳಲುತ್ತಿದೆ. ಈ ನಡುವೆ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಟ್ಯಾಂಕ್‌ನಿದ ಆಕ್ಸಿಜನ್ ಸೋರಿಕೆಯಾಗಿದ್ದು 11 ಜನರು ಮೃತಪಟ್ಟಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್, ಆಸ್ಪತ್ರೆಯ ಆಕ್ಸಿಜನ್ ಟ್ಯಾಂಕ್‌ಗೆ ಟ್ಯಾಂಕರ್‌ನಿದ ಆಕ್ಸಿಜನ್ ತುಂಬಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ರಕ್ಷಣಾ ತಂಡ ಸ್ಥಳದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಆಕ್ಸಿಜನ್ ಟ್ಯಾಂಕ್‌ನ ಕವಾಟ ತೆರೆದ ಪರಿಣಾಮ ಆಕ್ಸಿಜನ್ ಸೋರಿಕೆಯಾಗಿದೆ. ತೆರೆದಿದ್ದ ಕವಾಟವನ್ನು ಮುಚ್ಚಲಾಗಿದೆ. ಆದರೂ ಸಾಕಷ್ಟು ಆಮ್ಲಜನಕ ಸೋರಿಕೆಯಾಗಿದೆ. ಆಸ್ಪತ್ರೆಯಲ್ಲಿ ಸುಮಾರು 171 ರೋಗಿಗಳು ಆಮ್ಲಜನಕವನ್ನ ಹೊಂದಿದ್ದರು. ಅವರಲ್ಲಿ 11 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆಯೊದು ವರದಿ ಮಾಡಿದೆ.

More from the blog

ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...