Friday, January 30, 2026

’ಅರ್ಥ ಆಪುಜಿ’ ನಾಟಕ ಮುಹೂರ್ತ

ವಿಟ್ಲ: ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಅಂಗ ಸಂಸ್ಥೆಯಾದ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ಮೈರ ಕೇಪು ಈ ತಂಡದ 9 ನೇ ಕಲಾಕಾಣಿಕೆ ನಿತಿನ್ ಹೊಸಂಗಡಿ ರಚಿಸಿ ರಾಜಶೇಖರ್ ಶೆಟ್ಟಿ ಕುಡ್ತಮುಗೇರ್ ನಿರ್ದೇಶನ ಮಾಡಲಿರುವ ನಾಟಕ ಅರ್ಥ ಆಪುಜಿ (ಏರ್…?ಎಂಚ…..?) ನಾಟಕದ ಮುಹೂರ್ತ ಕೇಪು ಶ್ರೀ ಸುಬ್ರಾಯ ದೇವರ ಸನ್ನಿಧಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕುಕ್ಕಾಜೆಯ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ಶುಭ ಹಾರೈಸಿದರು. ಲಕ್ಷ್ಮಣ್ ಭಟ್ ಪೌರೋಹಿತ್ಯದಲ್ಲಿ ಪೂಜೆ ನಡೆಯಿತು.
ಶ್ರೀ ದುರ್ಗಾ ಮಿತ್ರ ವೃಂದ ಅಧ್ಯಕ್ಷರಾದ ಅಶೋಕ್ ಎ. ಇರಾಮೂಲೆ, ಗೌರವಾಧ್ಯಕ್ಷರಾದ ಜಗಜ್ಜೀವನ್ ರಾಮ್ ಶೆಟ್ಟಿ, ಪ್ರಧಾನ ಕಾರ್‍ಯದರ್ಶಿ ಶೀನ ನಾಯ್ಕ ಕಲ್ಲಾಪು, ಕೋಶಾಧಿಕಾರಿ ಪುರುಷೋತ್ತಮ ಮೈರ(ಪುತ್ತೂರು), ಶಿಸ್ತು ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ನಾಟಕ ತಂಡದ ಅಧ್ಯಕ್ಷ ಪದ್ಮನಾಭ ಕಲ್ಲಂಗಳ,ಸಂಚಾಲಕರಾದ ರಾಜೇಶ್ ಪುಚ್ಚೆಗುತ್ತು, ವ್ಯವಸ್ಥಾಪಕರಾದ ಶ್ರೇಯಸ್ ಪಾಟಾಳಿ ಕೇಪು, ನಾಟಕ ತಂಡದ ಕಲಾವಿದರು ಕಲಾಭಿಮಾನಿಗಳು ಉಪಸ್ಥಿತರಿದ್ದರು.

More from the blog

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...