Monday, February 2, 2026

ನಾವೂರು: ಮನೆಯೊಳಗೆ ಪ್ರವೇಶಿಸಿ ಮಹಿಳೆಯ ಮೇಲೆ ಹಲ್ಲೆ

ಬಂಟ್ವಾಳ: ಹಳೆಯ ವಿಚಾರವೊಂದನ್ನು ನೆಪವಾಗಿಟ್ಟುಕೊಂಡು ಮನೆಯೊಳಗೆ ಗುಂಪು ಕಟ್ಟಿಕೊಂಡು ಬಂದ ತಂಡ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮನೆಮಂದಿಗೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಕೋಂಪೆ ಎಂಬಲ್ಲಿ ನಡೆದಿದ್ದು, ಹಲ್ಲೆಯೊಳಗಾದ ಮಹಿಳೆ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ.
ನಾವೂರು ಗ್ರಾಮದ ನೇತ್ರಾವತಿ ಹೊಳೆ ಬದಿಯ ಕೋಂಪೆ ಚೆನ್ನಪ್ಪ ಪೂಜಾರಿಯ ಪತ್ನಿ ಹೇಮಾವತಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳನ್ನು ನಾವೂರು ಆಸ್ಪತ್ರೆ ಬಳಿಯ ಅಭಿರಾಜ್(22), ಕಿರಣ್(23) ವಿಶ್ವನಾಥ (56), ಅವಿನಾಶ್(21) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಆರೋಪಿ ಅಭಿರಾಜ್ ಚೆನ್ನಪ್ಪ ಪೂಜಾರಿಯವರಲ್ಲಿ ಕಾಲು ಕೆರದು ಜಗಳ ಹಚ್ಚಿಕೊಂಡಿದ್ದು, ರಾತ್ರಿ ಯಾಕೆ ಎಲ್ಲರಿಗೂ ತೊಂದರೆ ಕೊಡುತ್ತೀರಿ ಎಂದು ಪ್ರಶ್ನಿಸಿದ ಹೇಮಾವತಿಯವರನ್ನು ಅವಾಚ್ಯವಾಗಿ ನಿಂದಿಸಿದ ತಂಡ, ಮನೆಯೊಳಗೆ ಬಂದು ತಂಡದಲ್ಲಿದ್ದ ಕಿರಣ್ ಮುಖದ ಮೇಲೆ ಹೊಡೆದು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...