Thursday, February 13, 2025

ಶಂಕಿತ ನಕ್ಸಲರ ಓಡಾಟ : ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭ

ಸುಳ್ಯ: ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಕೂಂಬಿಂಗ್ ಆರಂಭಿಸಿದ್ದಾರೆ‌.

ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು.

ಶನಿವಾರ ಸಂಜೆ ಕೂಜಿಮಲೆಯ ಅಂಗಡಿಯೊಂದರಿಂದ ಎಂಟು ಮಂದಿಯ ತಂಡ ಭೇಟಿ ನೀಡಿ ನಗದು ನೀಡಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು, ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ನಕ್ಸಲರ ತಂಡದಲ್ಲಿ ಆರು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದರು ಎನ್ನಲಾಗಿದ್ದು, ಸಶಸ್ತ್ರಧಾರಿಗಳಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...