Wednesday, February 12, 2025

ನಯನಾಡು: ಶ್ರೀ ಧ.ಮಂ. ಸಂಚಾರಿ ಆಸ್ಪತ್ರೆ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಮಾರ್ಗದರ್ಶನದಲ್ಲಿ ಮತ್ತು ಶ್ರೀ ಧರ್ಮಸ್ಥಳ ಮೆಡಿಕಲ್ ಟ್ರಸ್ಟ್ ಇದರ ಸಹಯೋಗದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವಗ್ಗ ವಲಯದ ಪಿಲಾತಬೆಟ್ಟು ಕಾರ್ಯಕ್ಷೇತ್ರದ ಒಕ್ಕೂಟಗಳ ಮತ್ತು ನಯನಾಡು ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್, ಶ್ರೀರಾಮ ಯುವಕ ಮಂಡಲದ ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರಕ್ಕೆ ಪಿಲಾತಬೆಟ್ಟು ಗ್ರಾಮದ ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.
ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಹರೀಂದ್ರ ಪೈ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ದೂರದರ್ಶಿತ್ವದಿಂದ ನಡೆಸುತ್ತಿರುವ ಸಂಚಾರಿ ಆಸ್ಪತ್ರೆಯಿಂದ ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ಕಾಳಜಿಗೆ ಸಹಕಾರಿಯಾಗಿದ್ದು, ವರದಾನವಾಗಿದೆ. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮಗಳ ಅಭಿವೃದ್ಧಿಯಾಗಿದೆ. ಸಂಪೂರ್ಣ ಸುರಕ್ಷಾ ಯೋಜನೆ ಮೂಲಕ ವಿಮಾ ಸೌಲಭ್ಯಗಳ ಜಾಗೃತಿ ಮೂಡುವಂತಾಗಿದೆ ಎಂದು ಹೇಳಿದರು.
ಸಂಗಬೆಟ್ಟು ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ಸರಕಾರಗಳಿಂದ ಸಾಧ್ಯವಾಗದ ಜನೋಪಯೋಗಿ ಕಾರ್ಯಕ್ರಮಗಳು ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಸಾಧ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಹಳ್ಳಿಗಳಿಗೆ ತಲುಪುವ ಮೂಲಕ ದೇಶದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದರು. ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕುಮಂಗಿಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಸ್ಥರು ಸಂಚಾರಿ ಆಸ್ಪತ್ರೆಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ತಾ.ಪಂ.ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ ಶುಭ ಹಾರೈಸಿದರು.
ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾರಾಯಣ್ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಚಾರಿ ಆಸ್ಪತ್ರೆಯಲ್ಲಿ ದೊರಕುವ ಚಿಕಿತ್ಸಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ವಗ್ಗ ವಲಯ ಮೇಲ್ವಿಚಾರಕ ಜಯಕುಮಾರ್ ಅವರು ಶಿಬಿರದ ವಿವರ ನೀಡಿದರು.
ಒಕ್ಕೂಟಗಳ ಅಧ್ಯಕ್ಷ ರಾದ ರಮೇಶ್ ಪೂಜಾರಿ, ಸುಮಿತ್ರಾ, ನಯನಾಡು ಮತ್ತು ಪಿಲಾತಬೆಟ್ಟು ಒಕ್ಕೂಟಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಪಿಲಾತಬೆಟ್ಟು ಸೇವಾ ಪ್ರತಿನಿಧಿ ಅಮೃತಾ ಎಸ್. ಸ್ವಾಗತಿಸಿದರು. ಶ್ರೀ ರಾಮ ಯುವಕ ಮಂಡಲದ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಮುಂದಿನ ಎರಡು ತಿಂಗಳು ಶಿಬಿರ ನಡೆಯಲಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...