Monday, January 26, 2026

ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಸುದರ್ಶನ್ ಜೈನ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಹಿರಿಯ ಸಾಹಿತಿ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಹಾಗೂ ಸಾಮಾಜಿಕ , ಧಾರ್ಮಿಕ ಮುಖಂಡ ಸುದರ್ಶನ್ ಜೈನ್ ಆಯ್ಕೆಯಾಗಿರುತ್ತಾರೆ.
ಸುದರ್ಶನ್ ಜೈನ್‌ರವರು ತುಳು ಕೂಟ ಬಂಟ್ವಾಳದ ಅಧ್ಯಕ್ಷರಾಗಿ, ಜೈನ್ ಮಿಲನ್ ವಲಯ ಎಂಟರ ಮಂಗಳೂರು ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ . ಬಂಟ್ವಾಳ ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿದ್ದು ವಿವಿಧ ಸಂಘಟನೆಗಳಲ್ಲಿ ನೇತೃತ್ವ ವಹಿಸುವ ಮೂಲಕ ಸಕ್ರೀಯರಾಗಿ ಹಿರಿಯ ಸಹಕಾರಿ ಧುರೀಣರಾಗಿರುತ್ತಾರೆ.
ನೀರ್ಪಾಜೆ ಭೀಮ ಭಟ್ಟರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯಪರಿಷತ್ತಿನ ಅಧ್ಯಕರಾಗಿದ್ದರು. ಅವರು ಸಾಹಿತಿಯಾಗಿ, ಪತ್ರಕರ್ತರಾಗಿ, ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ದುಡಿದಿದ್ದರು. ಬಿ.ಸಿ.ರೋಡಿನಲ್ಲಿ ಕನ್ನಡ ಭವನ ನಿರ್ಮಾಣದ ಕನಸು ಕಂಡಿದ್ದರು. ಅದಕ್ಕಾಗಿ ಸ್ಥಳವನ್ನು ಗುರುತಿಸಿ ಶಂಕು ಸ್ಥಾಪನೆಯನ್ನು ನೆರವೇರಿಸಿದ್ದರು. ಇದೀಗ ಕನ್ನಡ ಭವನವು ನಿರ್ಮಾಣದ ಹಂತದಲ್ಲಿದೆ. ನೀರ್ಪಾಜೆ ಅಭಿಮಾನಿ ಬಳಗದ ಮೂಲಕ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರಧಾನವನ್ನು ಮಾಡಲಾಗುತ್ತಿದೆ. ತಾಲೂಕಿನಲ್ಲಿ ದತ್ತಿ ಉಪನ್ಯಾಸಗಳುಸೇರಿದಂತೆ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.
ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಜರಗಿದ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಮೋಹನ್ ರಾವ್, ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಕೋಶಾಧಿಕಾರಿ ಎಸ್.ಗಂಗಾಧರ ಭಟ್ ಕೊಳಕೆ ಮತ್ತು ಸರ್ವಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...