Sunday, February 1, 2026

ಎಪ್ರಿಲ್ 3 ರಂದು ನೇರಳಕಟ್ಟೆಯಲ್ಲಿ ಜನಪ್ರಿಯ ಸಮ್ಮಿಲನ ಉಚಿತ ವಿವಾಹ, ಜನಪ್ರಿಯ ಪ್ರಶಸ್ತಿ ಪ್ರದಾನ

ಬಂಟ್ವಾಳ : ಮಾಣಿ ಸಮೀಪದ ನೇರಳಕಟ್ಟೆ ಜನಪ್ರಿಯ ಗಾರ್ಡನ್ಸ್ ಗೆ 2 ವರ್ಷ ತುಂಬಿದ ಸ್ಮರಣಾರ್ಥ ಅಶಕ್ತ ಕುಟುಂಬದ ಉಚಿತ ವಿವಾಹ ಹಾಗೂ ಜನಪ್ರಿಯ ಪ್ರಶಸ್ತಿ ಪ್ರದಾನ ಸಮಾರಂಭ ಜನಪ್ರಿಯ ಸಮ್ಮಿಲನವು ಎಪ್ರಿಲ್ 03 ಶನಿವಾರ ಸಂಜೆ 05:30ಕ್ಕೆ ಜನಪ್ರಿಯ ಗಾರ್ಡನ್ಸ್ ನಲ್ಲಿ ಜರುಗಲಿದೆ.

ಜನಪ್ರಿಯ ಸಮೂಹ ಸಂಸ್ಥೆಗಳ ನಿರ್ಮಾತೃ ಹಾಗೂ ಹಾಸನದ ಖ್ಯಾತ ವೈದ್ಯರಾದ ಡಾ. ಅಬ್ದುಲ್ ಬಶೀರ್ ವಿ.ಕೆ. ಅವರು ಅಧ್ಯಕ್ಷತೆ ವಹಿಸಲಿದ್ದು, ಸಾಮಾಜಿಕ ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಗಣ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭ ಉಚಿತ ವಿವಾಹ ನಡೆಯಲಿದೆ.

ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕರಾದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಸಾಹಿತಿ, ಕೃಷಿಕ, ಶಿಕ್ಷಣ ತಜ್ಞರಾದ ಡಾ| ನರೇಂದ್ರ ರೈ ದೇರ್ಲ ಹಾಗೂ ಸದ್ದಿಲ್ಲದೇ ಹಗಲಿರುಳು ಬಡವರ ಸೇವೆಗೈಯ್ಯುವ ಉದ್ಯಮಿ ಆಸ್ಕರ್ ಆನಂದ್ ಅವರಿಗೆ ಈ ಬಾರಿಯ ಜನಪ್ರಿಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಇದೇ ಸಂದರ್ಭ ಡಾ. ಅಬ್ದುಲ್ ಬಶೀರ್ ವಿ.ಕೆ. ಹಾಗೂ ನಸ್ರೀನ್ ಬಶೀರ್ ದಾಂಪತ್ಯದ 27ನೇ ವೈವಾಹಿಕ ವರ್ಷಾಚರಣೆ ನಡೆಯಲಿದೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...