Thursday, June 26, 2025

ನೇರಳಕಟ್ಟೆ : ಪ್ರಾಥಮಿಕ ಶಾಲೆಗೆ ದರ್ಬಾರ್ ಎಂಟರ್ಪ್ರೈಸಸ್ ನಿಂದ ಶುದ್ಧೀಕರಿಸಿದ ನೀರಿನ ಯಂತ್ರ ಕೊಡುಗೆ

ವಿಟ್ಲ : ನೇರಳಕಟ್ಟೆ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ದರ್ಬಾರ್ ಎಂಟರ್ಪ್ರೈಸಸ್ ಮಾಲಕ ಅಬ್ದುಲ್ ಖಾದರ್ ಪರ್ಲೊಟ್ಟು ಅವರು ಕೊಡುಗೆಯಾಗಿ ನೀಡಿದ ಶುದ್ಧೀಕರಿಸಿದ ನೀರಿನ ಯಂತ್ರ ಸೋಮವಾರ ಶಾಲೆಗೆ ಸಮರ್ಪಿಸಲಾಯಿತು.
ಅಬ್ದುಲ್ ಖಾದರ್ ಪರ್ಲೊಟ್ಟು ಉದ್ಘಾಟಿಸಿ ಸಮರ್ಪಿಸಿದರು.

ಈ ಸಂದರ್ಭದಲ್ಲಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಲತೀಫ್ ನೇರಳಕಟ್ಟೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಎನ್.ಕೆ, ಸದಸ್ಯರುಗಳಾದ ಅಬ್ದುಲ್ ರಹಿಮಾನ್ ಪರ್ಲೊಟ್ಟು, ಅತಾವುಲ್ಲಾ ನೇರಳಕಟ್ಟೆ, ಚಂದ್ರಶೇಖರ ಪೆರಾಜೆ, ರಶೀದ್ ಪರ್ಲೊಟ್ಟು, ಮೋಹನ ಗೌಡ ಪೆರಾಜೆ, ಮೋಹಿನಿ ನೇರಳಕಟ್ಟೆ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ಕುಮಾರಿ ಸಹ ಶಿಕ್ಷಕರಾದ ಗೀತಾ, ಲೀಲಾವತಿ, ಸೇಸಪ್ಪ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...