ಬಂಟ್ವಾಳ: ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಮುಳುಗು ತಜ್ಞರಿಂದ ಮಹಿಳೆಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.

ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಗೋಪಿ ಪೂಜಾರಿ (49) ಕಾಣೆಯಾಗಿರುವ ಮಹಿಳೆ.
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿಯಾಗಿರುವ ಗೋಪಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಆಕೆಯ ಅಕ್ಕನ ಮನೆ ಬಿಸಿರೋಡಿನ ಚಿಕ್ಕಯ್ಯ ಮಠ ಎಂಬಲ್ಲಿ ಕೆಲದಿನಗಳಿಂದ ತಂಗಿದ್ದರು. ಎಂದಿನಂತೆ ಊಟ ಮಾಡಿ ಮಲಗಿದ ಮಹಿಳೆ ಮುಂಜಾನೆ 5 ಗಂಟೆಯ ವೇಳೆ ಮನೆಯಲ್ಲಿ ಇಲ್ಲದೆ ಕಾಣೆಯಾಗಿದ್ದಾರೆ.
ಮನೆಯವರು ಹುಡುಗಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆಯ ಮೇಲೆ ಗೋಪಿ ಅವರು ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಬಿದ್ದಿದೆ. ಹಾಗಾಗಿ ಅವರು ನೇತ್ರಾವತಿ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗೋಪಿ ಅವರು ಈ ಹಿಂದೆಯೂ ಮನೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
