Thursday, June 26, 2025

ನೆಟ್ಲ ಮುಡ್ನೂರಿನ ಕೇಂದ್ರಿಯ ನರ್ಸರಿಯಲ್ಲಿ ಸಸಿಗಳ ವಿತರಣೆ

ಬಂಟ್ವಾಳ: ಸಾಮಾಜಿಕ ಅರಣ್ಯ ಬಂಟ್ವಾಳ ವಲಯದ ನೆಟ್ಲ ಮುಡ್ನೂರಿನ ಕೇಂದ್ರಿಯ ನರ್ಸರಿಯಲ್ಲಿ ಈ ಸಲ ಒಟ್ಟು 50 ಸಾವಿರ ಸಸಿಗಳನ್ನು ಬೆಳೆಸಲಾಗಿದ್ದು, ಇದನ್ನು ರಸ್ತೆ ಬದಿ, ನೆಡು ತೋಪು, ಸರಕಾರಿ ಕಚೇರಿಯಲ್ಲಿ ಬೆಳೆಯಲು ಸಂಘ ಸಂಸ್ಥೆಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಣೆಗಾಗಿ ಬೆಳೆಸಲಾಗಿದೆ.

ಸಾರ್ವಜನಿಕರಿಗೆ ವಿತರಣೆಗಾಗಿ 6*9 ಹಾಗೂ 8*12 ಪಾಲಿಥಿನ್ ಚೀಲಗಳಲ್ಲಿ ಸಸಿಗಳನ್ನು ಬೆಳೆಸಲಾಗಿದ್ದು, ರಿಯಾಯಿತಿ ದರದಲ್ಲಿ ಇದನ್ನು ವಿತರಿಸಲಾಗುವುದು.
ಬೀಟೆ, ಶ್ರೀ ಗಂಧ, ಹಲಸು, ಹೆಬ್ಬಲಸು, ಪುನರ್ಪುಳಿ, ಕಹಿ ಬೇವು, ರೆಂಜ, ಬೆಂಗಾ, ಮಹಾಗನಿ, ಜಂಬೂ ನೇರಳೆ, ನೆಲ್ಲಿ, ನಿಂಬೆ ಮುಂತಾದ ಜಾತಿಯ ಸಸಿಗಳು ಲಭ್ಯವಿದೆ.
ನರೇಗಾ ಯೋಜನೆಯಲ್ಲಿ ಕೂಡ ಸಸಿಗಳನ್ನು ವಿತರಿಸಲಾಗುತ್ತಿದ್ದು, ಉದ್ಯೋಗ ಸೃಷ್ಟಿ ಹಾಗೂ ಮಾನವ ದಿನ ಸೃಜನೆಯ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.
ನರೇಗಾ ಯೋಜನೆಯಲ್ಲಿ 2 ಸಾವಿರ ಕಸಿ ಗೇರು ಲಭ್ಯವಿದ್ದು, ಅರ್ಹ ಫಲಾನುಭಾವಿಗಳಿಗೆ ವಿತರಿಸಲಾಗುವುದು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...