ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.


ಸುಮಾರು 28-29 ವರ್ಷದ ಯುವಕನ ಶವ ಇಂದು ಬೆಳಗ್ಗೆ ನದಿಯಲ್ಲಿ ತೇಲಿಕೊಂಡಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಶವವನ್ನು ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಮೃತರ ಗುರುತು ಪತ್ತೆಯಾದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಇನ್ಸ್‌ಪೆಕ್ಟರ್ ಚೆಲುವರಾಜು ತಿಳಿಸಿದ್ದಾರೆ.












