Friday, January 30, 2026

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರಿರುವ ಆಯ್ಕೆ ಸಮಿತಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ಚುನಾವಣಾ ಆಯುಕ್ತರ ನೇಮಕದ ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಆಯ್ಕೆ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, “ಸುಖಬೀರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲು 212 ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಇವರಲ್ಲಿ ಇಬ್ಬರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಸುಖಬೀ‌ರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅವರು ಐಎಎಸ್‌ ನಿವೃತ್ತ ಅಧಿಕಾರಿಗಳಾಗಿದ್ದಾರೆ. ಸುಖಬೀರ್ ಸಂಧು ಅವರು ಪಂಜಾಬ್‌ನವರಾದರೆ, ಜ್ಞಾನೇಶ್ ಕುಮಾ‌ರ್ ಅವರು ಕೇರಳದವರು ಎಂದು ತಿಳಿದುಬಂದಿದೆ. ಖಾಲಿ ಇರುವ ಎರಡು ಹುದ್ದೆಗಳಿಗೆ ಈಗ ಆಯುಕ್ತರನ್ನು ನೇಮಕ ಮಾಡಿದ ಕಾರಣ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಾಗತ್ತದೆ ಎಂದು ಹೇಳಲಾಗುತ್ತಿದೆ.

More from the blog

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...