Monday, January 26, 2026

ಪಿಎಫ್‌ಐ ಮತ್ತು ಉಗ್ರಚಟುವಟಿಕೆಯ ತಾಣವಾಗಿದ್ದ ಫ್ರೀಡಂ ಕಮ್ಯೂನಿಟಿ ಹಾಲ್‌ ಎನ್‌ಐಎ ವಶಕ್ಕೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ ಮಿತ್ತೂರಿನ ಕಮ್ಯುನಿಟಿ ಹಾಲ್‌ನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಭಯೋತ್ಪಾದನಾ ಕೃತ್ಯಗಳಿಗೆ ಸಹಕಾರಿಯಾಗುವಂತೆ ಕಾನೂನುಬಾಹಿರವಾಗಿ ತನ್ನ ಕಾರ್ಯಪಡೆಗೆ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಶಸ್ತ್ರ ತರಬೇತಿ ನೀಡುವುದು ತನಿಖೆಯ ವೇಳೆ ದೃಢಪಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಯುಎ (ಪಿ) ಸೆಕ್ಷನ್‌ 25 / 1067 ಕಾನೂನಿನನ್ವಯ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರ ಸೂಚನೆ ಮತ್ತು ಆದೇಶದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಬೆಂಗಳೂರು ಕಚೇರಿಯ ಮುಖ್ಯ ತನಿಖಾಧಿಕಾರಿ ಎಂ. ಷಣ್ಮುಗಂ ಫ್ರೀಡಂ ಎಜುಕೇಷನ‌ಲ್‌ ಮತ್ತು ಚಾರಿಟೇಬಲ್‌ ಟ್ರಸ್ಟ್ ಎಂದು ಕರೆಯಲ್ಪಡುವ ಪಾಪ್ಯುಲರ್‌ ಫ್ರಂಟ್‌ ಅಫ್‌ ಇಂಡಿಯಾ ಫ್ರೀಡಂ ಕಮ್ಯೂನಿಟಿ ಹಾಲ್‌ ಅಥವಾ ಮಿತ್ತೂರು ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿದೆ.

ಇನ್ನು ಈ ಭೂಮಿ, ಕಟ್ಟಡವನ್ನು ಪರಭಾರೆ ಮಾಡುವುದಾಗಲಿ, ಬಾಡಿಗೆಗೆ ನೀಡುವುದಾಗಲಿ, ಯಾವುದೇ ಬದಲಾವಣೆ ಮಾಡುವುದಾಗಲಿ, ಬಳಸಿಕೊಳ್ಳುವುದಾಗಲೀ ಮಾಡುವುದನ್ನು ಸಂಪೂರ್ಣವಾಗಿ ಎನ್‌ಐಎ ನಿಷೇಧಿಸಿ, ವಶಕ್ಕೆ ಪಡೆದಿರುವ ಕುರಿತು ಫೆ.23ರಂದು ಆದೇಶ ಜಾರಿಗೊಳಿಸಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...