ಸುಳ್ಯ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕಲ್ಲೇರಿಯ ಕುಲಾಯಿತೋಡು ಎಂಬಲ್ಲಿನ ಮನೆಯೊಂದಕ್ಕೆ ಎನ್‌ಐಎ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಘಟನೆ ವರದಿಯಾಗಿದೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ವಿಚಾರಣೆ ನಡೆಸಿರುವುದಾಗಿ ಹೇಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.