Tuesday, January 27, 2026

ಕರ್ನಾಟಕ ತುಳುಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಮೃತರು ತಾಯಿ,ಪತ್ನಿ,ಒಂದು ಹೆಣ್ಣು,ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ.ಮುಂಗಾರು,ಮಂಗಳೂರು ಮಿತ್ರ,ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧುವಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ ಸೇರಿದಂತೆ ಒಟ್ಟು 4 ಕೃತಿಗಳನ್ನು ಬರೆದಿದ್ದರು.ಲೇಖರಲ್ಲದೆ ಉತ್ತಮ  ಭಾಷಣಕಾರರು ಆಗಿದ್ದರು.ಉಜಿರೆಯಲ್ಲಿ ನಡೆದ ವಿಶ್ವ ತುಳು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರನ್ನು ಡಾ.ಹೆಗ್ಗಡೆಯವರು ಪುರಸ್ಕರಿಸಿದ್ದಲ್ಲದೆ ಹಲವಾರು ಸನ್ಮಾನಕ್ಕು ಪಾತ್ರರಾಗಿದ್ದರು.ಈಚೆಗಷ್ಟೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಅವರ ನಿವಾಸದಲ್ಲಿಯೇ “ಚಾವಡಿ ಪುರಸ್ಕಾರ” ನೀಡಿ ಗೌರವಿಸಲಾಗಿತ್ತು.ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ರು. ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘದಲ್ಲಿಯು ಸಕ್ರೀಯ ಸದಸ್ಯ,ಪದಾಧಿಕಾರಿಯಾಗಿಯು ಕಾರ್ಯನಿರ್ವಹಿಸಿದ್ದು,ಮಾಣಿಲ ಶ್ರೀಧಾಮದ ಸೇವಾ ಸಮಿತಿಯಲ್ಲು ಸಕ್ರೀಯವಾಗಿದ್ದರು.ಕುಲಾಲ ಮಠ ಕುಂಭೋಧರಿ ದೇವಿ ಟ್ರಸ್ಟ್ ನ ಸ್ಥಾಪಕರು ಆಗಿದ್ದರಲ್ಲದೆ ಕಾಂಗ್ರೆಸ್ ಪಕ್ಷದಲ್ಲು ಕಾರ್ಯಕರ್ತರಾಗಿ ಕೆಲ ಸಮಯಗಳ ಕಾಲ ಗುರುತಿಸಿದ್ದರು.

ಸಂತಾಪ: ಡಿ.ಎಂ.ಕುಲಾಲ್ ಅವರ ನಿಧನಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪಾಡಿ, ಮಾಜಿ ಸಚಿವ ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೆ.ಕೆ.ಪೂಂಜಾ, ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...