Monday, July 14, 2025

ಆಸ್ಕರ್ ಫರ್ನಾಂಡಿಸ್ ನಿಧನ

ಬಂಟ್ವಾಳ: ಕಳೆದ ಕೆಲವು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು ನಿಧನರಾದರು.

ಜು.18ರಂದು ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದರು. ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ತಿಳಿದುಬಂದಿತ್ತು. ನಂತರ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಪಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕುಟುಂಬಿಕರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಮುಂತಾದವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಹಳ್ಳಿಯಿಂದ ದಿಲ್ಲಿಯವರೆಗೆ: 1941 ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ದಿಲ್ಲಿಯಲ್ಲಿ ನಂತರ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ ಆಸ್ಕರ್ ಫರ್ನಾಂಡಿಸ್ ಅವರು 9 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಆಸ್ಕರ್ ಫರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರು.

More from the blog

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ..

ಮಂಗಳೂರು : ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ...