ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆ ನಿವಾಸಿ ಕೃಷಿಕ ಹೆಚ್ ಮೋಹನ್ ದಾಸ್ ಕಿಣಿ ( 78)ಅವರು ವಯೋಸಹಜವಾಗಿ ಗುರುವಾರ ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.
ಅವರು ಪತ್ನಿ, ಹಾಗೂ ಡಿ.ಸಿ.ಸಿ.ಬ್ಯಾಂಕ್ ವಲಯ ಮೇಲ್ವಿಚಾರಕ ಕೇಶವ ಕಿಣಿ ಸಹಿತ ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಡಾ| ಕಲ್ಲಡ್ಕ ಪ್ರಭಾಕರ್ ಭಟ್,ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ರಮಾನಾಥ ರೈ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ , ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.


