ವಿಟ್ಲ: ನೀರ್ಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವದಲ್ಲಿ ಹೊಸತಾಗಿ ಸೇರ್ಪಡೆಗೊಂಡ ಮಕ್ಕಳನ್ನು ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಹೂಗುಚ್ಚ ನೀಡಿ ಸ್ವಾಗತಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ್ ಸರಳಾಯ, ಸದಸ್ಯೆ ರೇಖಾ, ಉಪಾಧ್ಯಕ್ಷೆ ಜಲಜಾಕ್ಷಿ, ನಿವೃತ್ತ ಶಿಕ್ಷಕರಾದ ರೇವತಿ ಮತ್ತು ಸತ್ಯನಾರಾಯಣ ಭಟ್, ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಸಹಶಿಕ್ಷಕರು ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.
